Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು| ಪಾಲಿಕೆಯಲ್ಲಿ ತೆರಿಗೆ ವಸೂಲಿ...

ರಾಯಚೂರು| ಪಾಲಿಕೆಯಲ್ಲಿ ತೆರಿಗೆ ವಸೂಲಿ ಮಾಡಲಾಗುತ್ತಿದೆ ಹೊರತು, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ: ಶಾಸಕ ಶಿವರಾಜ ಪಾಟೀಲ ಆರೋಪ

ವಾರ್ತಾಭಾರತಿವಾರ್ತಾಭಾರತಿ18 Oct 2026 9:23 PM IST
share
ರಾಯಚೂರು| ಪಾಲಿಕೆಯಲ್ಲಿ ತೆರಿಗೆ ವಸೂಲಿ ಮಾಡಲಾಗುತ್ತಿದೆ ಹೊರತು, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ: ಶಾಸಕ ಶಿವರಾಜ ಪಾಟೀಲ ಆರೋಪ

ರಾಯಚೂರು: ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಗರದ ಅಭಿವೃದ್ಧಿ ವೇಗ ಪಡೆಯಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿತ್ತು. ಆದರೆ, ಮಹಾನಗರ ಪಾಲಿಕೆಯಾದ ಬಳಿಕ ಸಾರ್ವಜನಿಕರಿಂದ ದುಪ್ಪಟ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆಯೇ ಹೊರತು, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ರಾಯಚೂರು ನಗರ ಶಾಸಕ ಶಿವರಾಜ ಪಾಟೀಲ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ನಗರದಲ್ಲಿ ರಸ್ತೆ, ಪಾದಚಾರಿ ಮಾರ್ಗ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ. ಆದರೆ, ಮಹಾನಗರ ಪಾಲಿಕೆಯಾಗಿ ಹಲವು ವರ್ಷಗಳು ಕಳೆದರೂ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳ ಸ್ಥಿತಿಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಇದರಿಂದ ಜನರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು.

ಚಂದ್ರಮೌಳೇಶ್ವರ ವೃತ್ತದ ಸಮೀಪ ಜನತಾ ದರ್ಶಿನಿ ಹೋಟೆಲ್ ಪಕ್ಕದಲ್ಲಿರುವ ರಾಜಕಾಲುವೆ ಅಪಾಯಕಾರಿಯಾಗಿ ಕಾಣುತ್ತಿದೆ. ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಇಂತಹ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ. ಬಸವೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೆ ಪೂರ್ಣ ಪ್ರಮಾಣದ ಪಾದಚಾರಿ ಮಾರ್ಗಗಳಿಲ್ಲ. ಪಟೇಲ್ ವೃತ್ತದಿಂದ ಶೆಟ್ಟಿದಾವಿ ವೃತ್ತದವರೆಗೆ ಹಾಗೂ ಮಹಾಬಲೇಶ್ವರ ವೃತ್ತದಿಂದ ಪಟೇಲ್ ವೃತ್ತದವರೆಗಿನ ರಸ್ತೆಗಳಲ್ಲಿ ಪಾದಚಾರಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಲ್ಲಾನೆ ವೃತ್ತ, ಅಂಬೇಡ್ಕರ್ ವೃತ್ತ, ಮಹಾಬಲೇಶ್ವರ ವೃತ್ತ, ಪಟೇಲ್ ವೃತ್ತ ಹಾಗೂ ಸ್ಟೇಷನ್ ವೃತ್ತ ಸೇರಿದಂತೆ ನಗರದ ಹಲವು ಪ್ರಮುಖ ವೃತ್ತಗಳಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದೆ. ಆದರೆ, ಸುಗಮ ಸಂಚಾರಕ್ಕೆ ಅಗತ್ಯವಿರುವ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಮಹಾವೀರ ವೃತ್ತದಿಂದ ಗಾಂಧಿ ಚೌಕ್, ಹರಿಹರ ರಸ್ತೆ, ಬಟ್ಟೆ ಬಜಾರ್, ಕಂದಗಡ್ಡೆ ಮಾರಮ್ಮ ದೇವಸ್ಥಾನ ರಸ್ತೆ ಹಾಗೂ ಗೀತಾ ಮಂದಿರ ರಸ್ತೆಗಳು ಕಿರಿದಾಗಿದ್ದು, ಅಗತ್ಯವಿರುವ ಕಡೆ ರಸ್ತೆ ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆಯಾದ ಬಳಿಕ ಆಸ್ತಿ ತೆರಿಗೆ, ನೀರಿನ ಕರ, ಖಾತಾ ಬದಲಾವಣೆ ಶುಲ್ಕ, ಟ್ರೇಡ್ ಲೈಸೆನ್ಸ್ ಸೇರಿದಂತೆ ವಿವಿಧ ತೆರಿಗೆಗಳನ್ನು ಪಾಲಿಕೆಯ ನಿಯಮಗಳಂತೆ ವಸೂಲಿ ಮಾಡಲಾಗುತ್ತಿದೆ. ಆದರೆ, ಅದಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹಲವು ಬಡಾವಣೆಗಳಲ್ಲಿ ರಸ್ತೆಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಶೌಚಾಲಯಗಳ ಅಭಾವ ಹಾಗೂ ಒಳಚರಂಡಿ ವ್ಯವಸ್ಥೆಯ ಕೊರತೆ ಇದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಾಲಿಕೆ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಸಂತೋಷ ರಾಣಿ ಮತ್ತು ಮಲ್ಲಿಕಾರ್ಜುನ ಅವರು ಪಾಲಿಕೆ ನೌಕರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಧಿಕಾರಿಗಳು ಮತ್ತು ನೌಕರರ ನಡುವೆ ಸಮನ್ವಯತೆ ಇಲ್ಲದಿದ್ದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯಲು ಸಾಧ್ಯವಿಲ್ಲ. ಪಾಲಿಕೆಯ ಆಡಳಿತ ವ್ಯವಸ್ಥೆ ಸುಧಾರಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ಸುಲಭವಾಗಿ ಆಗುತ್ತಿಲ್ಲ. ಸಣ್ಣಪುಟ್ಟ ಕೆಲಸಗಳಿಗೂ ಜನರು ಹತ್ತಾರು ಬಾರಿ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇದೆ. ಸಾರ್ವಜನಿಕರ ಕೆಲಸಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವ ವ್ಯವಸ್ಥೆ ಜಾರಿಗೆ ತರಬೇಕು. ಇಲ್ಲವಾದರೆ ಜನಪ್ರತಿನಿಧಿಗಳ ಮೇಲೆಯೂ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುವಂತಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ. ಪಾಪರೆಡ್ಡಿ, ಎನ್.ಶಂಕ್ರಪ್ಪ ರವೀಂದ್ರ ಜಲ್ದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

RaichurMLAShivraj Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X