Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಮೋದಿ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ:...

ಮೋದಿ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ: ಮಾಜಿ ಸಂಸದ ಎಂ.ಉಗ್ರಪ್ಪ

"ಪಹಲ್ಗಾಮ್ ದಾಳಿಗೆ ಇಂಟೆಲಿಜೆನ್ಸಿ ಇಲಾಖೆಯ ವೈಫಲ್ಯವೇ ಕಾರಣ"

ವಾರ್ತಾಭಾರತಿವಾರ್ತಾಭಾರತಿ27 April 2025 2:55 PM IST
share
ಮೋದಿ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ: ಮಾಜಿ ಸಂಸದ ಎಂ.ಉಗ್ರಪ್ಪ

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ, ಬೇಹುಗಾರಿಕೆ, ಭದ್ರತೆ ವೈಫಲ್ಯದಿಂದ ಪುಲ್ವಾಮಾ, ಪಹಲ್ಗಾಮ ನಲ್ಲಿ ಉಗ್ರರ ದಾಳಿಯಾಗಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಧಾನಿ ಮೋದಿ ನೈತಿಕೆ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಂ.ಉಗ್ರಪ್ಪ ಒತ್ತಾಯಿಸಿದರು.

ಅವರಿಂದು ರಾಯಚೂರಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪುಲ್ವಾಮಾ ದಾಳಿಯಲ್ಲಿ ಕಾಶ್ಮೀರಕ್ಕೆ 200 ಕೆ.ಜಿಯ ಆರ್ ಡಿಎಕ್ಸ್ ಹೇಗೆ ಬಂತು ಅಂತ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರ ಇದುವರೆಗೆ ಹೇಳಿಲ್ಲ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೆ ಅನೇಕ ದಾಳಿಯಾಗಿವೆ. ಅನೇಕ ಸೈನಿಕರು, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅನೇಕರು ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ. ಸಂವಿಧಾನದ 21 ನೇ ಅನುಚ್ಛೇದದ ಪ್ರಕಾರ ದೇಶದ ನಾಗರಿಕರ ರಕ್ಷಣೆ, ಸ್ವಾತಂತ್ರ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಇದನ್ನು ನಿರ್ವಹಣೆ ಮಾಡುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಮನ ಹೆಸರಿನಲ್ಲಿ ಆಡಳಿತ ನಡೆಸುವ ಪ್ರಧಾನಿ‌ಮೋದಿ ಅವರು ರಾಮನ ಆದರ್ಶ ಪಾಲಿಸುತ್ತಿಲ್ಲ. ಸಬ್ ಕಾ ಸಾತ್, ಸಬ್ ಕಾ‌ ವಿಕಾಸ್, ಅಚ್ಚೇ ದಿನ್ ಬರಲಿದೆ ಎಂದು ಅಧಿಕಾರಕ್ಕೆ ಬಂದು ಏನು ಮಾಡುತ್ತಿದ್ದಾರೆ. ಇದೇನಾ ಅಚ್ಛೇ ದಿನ್? ಯಾವ ದೇಶದ, ರಾಜ್ಯದ ಬೇಹುಗಾರಿಕೆ, ಭದ್ರತೆ ಕಾಪಾಡುವ ಇಲಾಖೆ ವೈಫಲ್ಯವಾದರೆ ದೇಶದಲ್ಲಿ ಅಶಾಂತಿ ಸೃಷ್ಠಿಯಾಗಿ ದೇಶದ ನೆಮ್ಮದಿ‌‌ ಹಾಳಾಗಿ ಅರಾಜಕತೆ ಸೃಷ್ಠಿಯಾಗುತ್ತೆ ಅಂತ‌ 700 ವರ್ಷಗಳ‌ ಹಿಂದೆ ರಾಮಾಯಣದಲ್ಲಿ ರಾಮ ಹೇಳಿದ್ದನ್ನು ನೆನಪಿಸಿಕೊಳ್ಳಬೇಕು ಎಂದರು.

ಸಂತ್ರಸ್ತರ ವಿಚಾರದಲ್ಲಿ ರಾಜಕೀಯ ಸಲ್ಲದು. ದೇಶದ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಲಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಯಾವುದೇ ನಿರ್ಧಾರ ಕೈಗೊಂಡಿದ್ದರೆ ಸಹಕಾರ ನೀಡಲಿದೆ. ಆದರೆ ಸೈನಿಕರ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದರು.

ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ದುಬೈ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಬಿಹಾರದ ಚುನಾವಣಾ ಪ್ರಚಾರಕ್ಕೆ ತೆರಳಿ ಸಂತ್ರಸ್ಥರ ಸಾವಿನ ಕುರಿತು ಪ್ರತಿಕಾರದ ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯಲು ಯತ್ನಿಸಿರುವುದು ಮತ್ತು ಸರ್ವ ಪಕ್ಷಗಳ ಸಭೆಗೆ ಗೈರಾಗಿದ್ದು ಖಂಡನೀಯ ಎಂದರು.

ಉಗ್ರವಾದಿಗಳಿಗೆ ಧರ್ಮವಿಲ್ಲ. ಪಹಲ್ಗಾಮ ದಾಳಿಯನ್ನು ಎಲ್ಲರೂ ಖಂಡಿಸಿದ್ದಾರೆ. ಮಹಾತ್ಮ ಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿಯನ್ನು ಕೊಂದವರು ಯಾರು, ಅವರೆಲ್ಲರೂ ಮುಸ್ಲಿಮರಾ? ಎಂದು ಪ್ರಶ್ನಿಸಿದರು.

ಜಾತಿ ಜನಗಣತಿ ಸಮೀಕ್ಷೆ ಸುಳ್ಳು ಅಂತ ಹೇಳ್ತಾ ಇದ್ದಾರೆ ಎಂಬ ಪ್ರಶ್ನೆಗೆ‌ ಉತ್ತರಿಸಿದ ಉಗ್ರಪ್ಪ ಅವರು, ಜಾತಿಗಣತಿಯಿಂದ ಯಾರಿಗೂ ಬಹುದೊಡ್ಡ ನಷ್ಟವಿಲ್ಲ. ನಾನು ವರದಿ ಪಡೆಯಲು ಯತ್ನಿಸಿದರೂ ನನಗೆ ಸಿಕ್ಕಿಲ್ಲ. ಪರ, ವಿರೋಧವಾಗಿ ಮಾತನಾಡುವವರು ಒಮ್ಮೆ ಓದಿದ ಬಳಿಕವೇ ಪ್ರಶ್ನೆ ಮಾಡಬೇಕು. 54 ಮಾನದಂಡಗಳ ಮೇಲೆ ಸಮೀಕ್ಷೆ ನಡೆದಿದೆ. ಸಾಮಾಜಿಕ,ಆರ್ಥಿಕ, ಶೈಕ್ಷಣಿಕ ಆಧಾರದ ಮೇಲೆ ವರದಿ ತಯಾರಿಯಾಗಿದೆ. ಈ ಹಂತದಲ್ಲಿ ಪರ ವಿರೋಧ ಯಾರು ಮಾಡಬಾರದು. ಕರ್ನಾಟಕ ಶಾಂತಿಯ ತೋಟ, ಸರ್ವ ಧರ್ಮ ಸಮಾನತೆ ಕಾಪಾಡಿಕೊಂಡು ಬಂದಿದೆ. ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ವರದಿ ಪ್ರಕಟಿಸಿ ಎರಡು ಸದನದಲ್ಲಿ ಚರ್ಚೆ ಮಾಡಬೇಕು. ಯಾವ ವರ್ಗಕ್ಕೂ ಬಹುದೊಡ್ಡ ಅನ್ಯಾಯ, ಬಹುದೊಡ್ಡ ಲಾಭ ಆಗಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ಸಂಚಾಲಕ ಡಾ.ರಜಾಕ್ ಉಸ್ತಾದ್, ಮಹಿಳಾ ಮುಖಂಡೆ ಶ್ರೀದೇವಿ,ಮಂಜುಳಾ ಅಮರೇಶ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X