ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬ
ಮುನ್ನೂರು ಕಾಪು ಸಮಾಜದಿಂದ ಸಾಂಸ್ಕೃತಿಕ ವೈಭವಕ್ಕೆ ಮಹತ್ವ : ಶಾಸಕ ಡಾ.ಶಿವರಾಜ ಪಾಟೀಲ್

ರಾಯಚೂರು: ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆಗೆ ಧಕ್ಕೆ ಅಗುವ ಬೆಳವಣಿಗೆ ನಡೆಯುತ್ತಿದ್ದು, ಮುನ್ನೂರು ಕಾಪು ಸಮಾಜ ಸಾಂಸ್ಕೃತಿಕ ಕಾರ್ಯಕ್ರಮಗಳ ಅದ್ದೂರಿ ಆಯೋಜನೆ ಮಾಡುವ ಮೂಲಕ ಸಂಸ್ಕೃತಿ ರಕ್ಷಣೆಯ ಕಾರ್ಯ ಮಾಡುತ್ತಿದೆ ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಅವರು ಹೇಳಿದರು.
ನಗರದ ಶಾರದ ವಿದ್ಯಾನಿಕೇತನ ಶಾಲೆ ಆವರಣದಲ್ಲಿ ಆಯೋಜಿಸಿದ ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬದ ಮೂರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುನ್ನೂರು ಕಾಪು ಸಮಾಜ ಅದ್ದೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ರಾಜ್ಯವೇ ರಾಯಚೂರು ಜಿಲ್ಲೆಯನ್ನು ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ನಶಿಸಿ ಹೋಗುತ್ತಿರುವ ಸಾಂಸ್ಕೃತಿಕ ಭವ್ಯ ಪರಂಪರೆಯನ್ನು ಮತ್ತೆ ಮುನ್ನೂರು ಕಾಪು ಸಮಾಜ ರಕ್ಷಣೆ ಮಾಡುತ್ತಿದೆ. ಮುನ್ನೂರು ಕಾಪು ಸಮಾಜದ ಕಾರ್ಯ ಶ್ಲಾಘನೀಯ ಎಂದರು.
ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಅವರು ಮಾತನಾಡಿ, ಮುಂಗಾರು ಹಬ್ಬ ಈ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಕಾರಹುಣ್ಣಿಮೆ ಅಂಗವಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಮುನ್ನೂರು ಕಾಪು ಸಮಾಜ ನಗರ ಪ್ರದೇಶದಲ್ಲಿ ಅತ್ಯಂತ ಅದ್ದೂರಿಯಾಗಿ ಆಚರಣೆ ಮಾಡುವ ನಗರದ ಎಲ್ಲಾ ಬಡಾವಣೆಗಳಲ್ಲಿ ಸಾಂಸ್ಕೃತಿಕ ರಸದೌತಣ ನೀಡುತ್ತಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ದಿವ್ಯಾ ಸಾನಿಧ್ಯವನ್ನು ವೀರತಪಸ್ವಿ ಅಭಿನವ ರಾಚೋಟಿ ಮಹಾಸ್ವಾಮಿಗಳು ವಹಿಸಿದ್ದರು.
ಈ ಸಂದರ್ಭದಲ್ಲಿ ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡರು ಮಾಜಿ ಶಾಸಕರು ಹಾಗೂ ಹಬ್ಬದ ರೂವಾರಿ ಎ.ಪಾಪಾರೆಡ್ಡಿ, ವಿಧಾನ ಪರಿಷತ್ ಎ. ವಸಂತಕುಮಾರ, ಜಯವಂತರಾವ್ ಪತಂಗಿ, ಬಾಬು ಭಂಡಾರಿಗಲ್, ಬಸವರಾಜಪ್ಪ, ಅಮರೇಗೌಡ ಹಂಚಿನಾಳ, , ಮಹಾದೇವಪ್ಪ ಏಗನೂರು, ಗುಡ್ಸಿ ನರಸರೆಡ್ಡಿ, ತಿಮ್ಮರೆಡ್ಡಿ, ಬುಡತಪ್ಪಗಾರು, ಮುನ್ನೂರು ಕಾಪು ಸಮಾಜದ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.