ಮಸ್ಕಿ ಪುರಸಭೆಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ರಾಯಚೂರು : ಜಿಲ್ಲೆಯ ಮಸ್ಕಿ ಪುರಸಭೆ ವತಿಯಿಂದ 2025-26ನೇ ಸಾಲಿನ ಪುರಸಭೆ ನಿಧಿ ಶೇ.22, 7.25, 5ರ ವೈಯಕ್ತಿಕ ಕಲ್ಯಾಣ ಕಾರ್ಯಕ್ರಮದ ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಹ ಧನ, ವಿಕಲಚೇತನರ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಲು ಸಹಾಯ ಧನ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಅಡುಗೆ ಅನಿಲ ಸಂಪರ್ಕ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆ.14ರ ಸಂಜೆ 5.30ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಪುರಸಭೆಗೆ ಸಲ್ಲಿಸಬಹುದಾಗಿದೆ. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಷರತ್ತುಗಳಿಗಾಗಿ ಕಚೇರಿ ಸಮಯದಲ್ಲಿ ನೋಟಿಸ್ ಬೋರ್ಡನಲ್ಲಿ ನೊಡಬಹುದು ಅಥವಾ ಕಚೇರಿ ವೆಬ್ ಸೈಟ್ ವಿಳಾಸ: www.maskitown.mrc.gov.in ನಲ್ಲಿ ನೋಡಬಹುದಾಗಿದೆ ಎಂದು ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





