ಮಸ್ಕಿ | ಬೈಕ್‌ಗಳ ಮುಖಾಮುಖಿ ಢಿಕ್ಕಿ : ಮೂವರು ಮೃತ್ಯು

ರಾಯಚೂರು : ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಮುಳ್ಳೂರು ಕ್ಯಾಂಪ್ ಬಳಿ ನಡೆದಿದೆ.
ಮೃತರನ್ನು ಶಿವಪ್ಪ(37), ಮೌನೇಶ(20) ಹಾಗೂ ಹನುಮೇಶ(24) ಎಂದು ಗುರುತಿಸಲಾಗಿದೆ.
ಶಿವಪ್ಪ ತನ್ನ ಬೈಕ್‌ನಲ್ಲಿ ಸಿಂಧನೂರಿನಿಂದ ಬಸ್ಸಾಪುರ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಇನ್ನೊಂದು ಬೈಕ್‌ನಲ್ಲಿ ಮಸ್ಕಿಯಿಂದ ಮೌನೇಶ್, ಹನುಮೇಶ್ ಬರುತ್ತಿದ್ದರು. ಮಾರ್ಗ ಮಧ್ಯೆ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಢಿಕ್ಕಿಯಿಂದ ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ.
Next Story





