Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸ್ವಚ್ಛ ನಗರ ನಿರ್ಮಾಣ, ಕುಡಿಯುವ ನೀರಿನ...

ಸ್ವಚ್ಛ ನಗರ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯ ವಿಸ್ತರಣೆಗೆ ಅಗತ್ಯ ಸಹಕಾರ : ಸಚಿವ ಯತೀಂದ್ರ ಸಿದ್ದರಾಮಯ್ಯ

"ರಾಯಚೂರು ಮಹಾನಗರ ಪಾಲಿಕೆಯಲ್ಲಿ 108 ಪೌರಕಾರ್ಮಿಕರ ನೇಮಕ"

ವಾರ್ತಾಭಾರತಿವಾರ್ತಾಭಾರತಿ7 Sept 2026 4:55 PM IST
share
ಸ್ವಚ್ಛ ನಗರ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯ ವಿಸ್ತರಣೆಗೆ ಅಗತ್ಯ ಸಹಕಾರ : ಸಚಿವ ಯತೀಂದ್ರ ಸಿದ್ದರಾಮಯ್ಯ

ರಾಯಚೂರು : ರಾಯಚೂರು ಮಹಾನಗರ ಪಾಲಿಕೆಯಲ್ಲಿ ಸಿಬ್ಬಂದಿ ಹಾಗೂ ಸ್ವಚ್ಛತಾ ವಾಹನಗಳ ಕೊರತೆಯನ್ನು ಶೀಘ್ರದಲ್ಲೇ ನೀಗಿಸಿ, ನಗರವನ್ನು ಸ್ವಚ್ಛ ಹಾಗೂ ಸುಸಜ್ಜಿತ ನಗರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯಲ್ಲಿ 108 ಪೌರಕಾರ್ಮಿಕರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ಸ್ವಚ್ಛತಾ ವಾಹನಗಳನ್ನು ಒದಗಿಸಲಾಗುವುದು ಎಂದರು.

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಬಳಸಿಕೊಂಡು ರಸ್ತೆ, ಚರಂಡಿ, ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಯಚೂರು ಮಹಾನಗರ ಪಾಲಿಕೆ ಈಗಾಗಲೇ ಶೇ.60ರಷ್ಟು ಇ-ಖಾತಾಗಳನ್ನು ವಿತರಿಸಿದ್ದು, ಶೀಘ್ರದಲ್ಲೇ ಶೇ.100ರಷ್ಟು ಗುರಿ ಸಾಧಿಸಲಾಗುವುದು ಎಂದು ಸಚಿವರು ಹೇಳಿದರು.

ಸಿದ್ದರಾಂಪುರ ಲೇಔಟ್‌ನಲ್ಲಿ ನಿವೇಶನ ಖರೀದಿಸಿದವರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪಕ್ಕದ ಜಾಗದಲ್ಲಿ ನಿವೇಶನ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಈ ಕುರಿತು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿಸಿದರು.

ನಗರದಲ್ಲಿ 24 ಗಂಟೆ ಕುಡಿಯುವ ನೀರು ಪೂರೈಕೆ ಕಾಮಗಾರಿ ವಿಳಂಬವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಯಡಿ ಬಹುತೇಕ ಎಲ್ಲೆಡೆ ಸಂಪರ್ಕ ಜೋಡಣೆ ಪೂರ್ಣಗೊಂಡಿದೆ. ಆದರೆ ಗುತ್ತಿಗೆದಾರರು ಹೈಕೋರ್ಟ್‌ನಲ್ಲಿ ದಾವೆ ಹೂಡಿರುವುದರಿಂದ ಕಾಮಗಾರಿ ವಿಳಂಬವಾಗಿದೆ ಎಂದರು.

ಪಾಲಿಕೆಯ ಪರವಾಗಿ ನ್ಯಾಯಾಲಯದಲ್ಲಿ ಸಮರ್ಪಕವಾಗಿ ವಾದ ಮಂಡಿಸಿ ಕಾನೂನು ತೊಡಕನ್ನು ನಿವಾರಿಸಲಾಗುವುದು. ಅಗತ್ಯವಿರುವ ಕಡೆ ಹಳೆಯ ಪೈಪ್‌ಲೈನ್‌ಗಳನ್ನು ದುರಸ್ತಿಗೊಳಿಸಿ ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.

ಹಿಂದುಳಿದ ವರ್ಗಗಳ ಒಕ್ಕೂಟದ ಸಮಾವೇಶಕ್ಕೆ ಯಾರಿಗೆ ಆಹ್ವಾನ ನೀಡಬೇಕು ಎಂಬುದು ಆಯೋಜಕರ ನಿರ್ಧಾರವಾಗಿದ್ದು, ಅದರಲ್ಲಿ ರಾಜಕೀಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಬಿಜೆಪಿ ಪಾದಯಾತ್ರೆ ಕುರಿತು ಟೀಕಿಸಿದ ಅವರು, ಸಚಿವ ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವೂ ಪಾದಯಾತ್ರೆ ಮುಂದುವರಿಸಿರುವುದು ಅದರ ಹಿಂದಿನ ರಾಜಕೀಯ ಉದ್ದೇಶವನ್ನು ತೋರಿಸುತ್ತದೆ ಎಂದರು.

ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರೆತಿಲ್ಲ. ಈ ಹಿಂದೆಯೂ ಜಿಎಸ್‌ಟಿ ಪಾಲಿನ ಹಣಕ್ಕಾಗಿ ಕಾನೂನು ಹೋರಾಟ ನಡೆಸಬೇಕಾಗಿತ್ತು. ಹೆಚ್ಚಿನ ತೆರಿಗೆ ನೀಡುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

Tags

Yathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X