Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕೃಷಿ ಸಂಸ್ಕರಣ ಘಟಕಗಳ ಬಳಕೆಯಿಂದ ರೈತರ...

ಕೃಷಿ ಸಂಸ್ಕರಣ ಘಟಕಗಳ ಬಳಕೆಯಿಂದ ರೈತರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ16 Oct 2025 8:03 PM IST
share
ಕೃಷಿ ಸಂಸ್ಕರಣ ಘಟಕಗಳ ಬಳಕೆಯಿಂದ ರೈತರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ

ರಾಯಚೂರು: ಕೃಷಿ ಸಂಸ್ಕರಣಾ ಘಟಕಗಳನ್ನು (ಅಗ್ರೋ ಪ್ರೊಸೆಸಿಂಗ್ ಸೆಂಟರ್) ಬಳಸಿಕೊಂಡಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಸಿಗಲಿದೆ. ರೈತರಿಗೆ ಮಾರುಕಟ್ಟೆ ಮತ್ತು ಸಂಪರ್ಕ ಸರಳವಾಗಲಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಸಲಹೆ ಮಾಡಿದರು.

ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಅಕ್ಟೋಬರ್ 16ರಂದು, ಭಾರತ ಸರ್ಕಾರ ಮತ್ತು ನಬಾರ್ಡ್ ಇವರ ಸಹಯೋಗದಲ್ಲಿ ನಡೆದ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇಡೀ ರಾಯಚೂರು ಜಿಲ್ಲೆಯಾದ್ಯಂತ ಅಂದಾಜು 40 ಕೃಷಿ ಸಂಸ್ಕರಣ ಘಟಕಗಳ ಸ್ಥಾಪನೆ ಮಾಡಿ ಸಂಸ್ಕರಣೆಗೊಳಪಡಿಸುವಷ್ಟು ರಾಯಚೂರು ಜಿಲ್ಲೆಯೊಂದರಲ್ಲಿಯೇ ಪ್ರತಿ ವರ್ಷ ಅಂದಾಜು ಸಾವಿರಾರು ಮೆಟ್ರಿಕ್ ಟನ್ ದಷ್ಟು ತೊಗರಿ ಉತ್ಪನ್ನ ಬರುತ್ತದೆ ಎನ್ನುವ ಮಾಹಿತಿ ಇದೆ. ತುಂಗಭದ್ರಾ ಮತ್ತು ಕೃಷ್ಣಾ ನದಿಗಳ ಮಧ್ಯೆದ ಈ ಭೂಮಿಯು ಅತ್ಯಂತ ಸಂಪದ್ಭರಿತವಾಗಿದೆ. ಈ ಪ್ರದೇಶದಲ್ಲಿ ಪ್ರತಿ ವರ್ಷ ಅಂದಾಜು 80,000 ಮೆಟ್ರಿಕ್ ಟನ್ ತೊಗರಿ ಉತ್ಪನ್ನ ಹಾಗೂ ಅಂದಾಜು 34,000 ಮೆಟ್ರಿಕ್ ಟನ್ ಕಡಲೆ ಉತ್ಪನ್ನ ಬರುತ್ತಿದ್ದು, ಯಾವುದೇ ಉತ್ಪನ್ನ ಇರಲಿ ರೈತರು ಆಯಾ ಉತ್ಪನ್ನವನ್ನು ನೇರವಾಗಿ ಮಾರುಕಟ್ಟೆಗೆ ಸಾಗಿಸದೇ ಸಂಸ್ಕರಣೆಗೊಳಪಡಿಸಿ ಪ್ಯಾಕೆಟ್ ಅಥವಾ ಬೇರೆ ಬೇರೆ ರೂಪದಲ್ಲಿ ಮಾರಾಟ ಮಾಡಿದಲ್ಲಿ ಉತ್ತಮ ಬೆಲೆ ಸಿಗಲಿದೆ. ಈ ದಿಶೆಯಲ್ಲಿ ಯೋಚಿಸಿ ಕೇಂದ್ರ ಸರ್ಕಾರವು ಕೃಷಿ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಭಾಗವಾಗಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರಕ್ಕೆ ಹಸಿರುನಿಸಾನೆ ತೋರಲಾಗಿದೆ. ರೈತರು ಈ ಕೃಷಿ ಸಂಸ್ಕರಣಾ ಘಟಕಗಳ ಸದುಪಯೋಗ ಪಡೆಯಬೇಕು ಎಂದು ಸಲಹೆ ಮಾಡಿದರು.

ಕೃಷಿ ಸಂಸ್ಕರಣಾ ಘಟಕಗಳ ಸ್ಥಾಪನಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಮ್ಮೊಂದಿಗೆ ಕೈಜೋಡಿಸಿರುವುದು ಉತ್ತಮ ಬೆಳೆವಣಿಗೆಯಾಗಿದೆ. ರಾಜ್ಯ ಕೇಂದ್ರದಲ್ಲಿನ ಉನ್ನತ ಮಟ್ಟದ ಅಧಿಕಾರಿಗಳು, ಜಿಲ್ಲಾ ಕೇಂದ್ರದಲ್ಲಿನ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೃಷಿ ಅಧಿಕಾರಿಗಳು ಇಂತಹ ಕೃಷಿ ಸಂಸ್ಕರಣಾ ಘಟಕಗಳ ಬಲವರ್ಧನೆಯ ಬಗ್ಗೆ ಗಮನ ಹರಿಸಬೇಕು ಎಂದು ಅವರು ಸಲಹೆ ಮಾಡಿದರು.

ಕೇಂದ್ರ ಸರ್ಕಾರವು ರೈತರ ಪರವಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ ನೀಡುವುದಕ್ಕೆ ಆದ್ಯತೆ ನೀಡಿದ್ದೇವೆ. 24.74 ಕೋಟಿ ರೈತರಿಗೆ ಕಿಸಾನ್ ಕಾರ್ಡ್ ನೀಡಿದ್ದೇವೆ. 8000 ಕೋಟಿಯಷ್ಟು ಮಣ್ಣಿನ ಪರೀಕ್ಷೆ ನಡೆಸಿದ್ದೇವೆ. ಕೃಷಿ ಸಿಂಚಾಯಿ ಯೋಜನೆಯಡಿ 93,000 ಕೋಟಿ ರೂ.ನಷ್ಟು ಅನುದಾನವನ್ನು ನೀರಾವರಿ ಯೋಜನೆಗಳಿಗೆ ನೀಡಿದ್ದೇವೆ. ಪ್ರಧಾನಮಂತ್ರಿ ಫಸಲ ಭಿಮಾ ಯೋಜನೆಯಡಿ 1.74 ಲಕ್ಷ ಕೋಟಿ ರೂ. ಪರಿಹಾರವನ್ನು ಅನ್ನದಾತರಿಗೆ ನೀಡಿದ್ದೇವೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ತಲಾ ಒಬ್ಬ ರೈತರಿಗೆ ವಾರ್ಷಿಕ 6 ಸಾವಿರ ರೂ.ನಂತೆ ಇದುವರೆಗೆ 3.69 ಲಕ್ಷ ಕೋಟಿ ರೂ.ನಷ್ಟು ಮೊತ್ತವನ್ನು ಕಿಸಾನ್ ಸಮ್ಮಾನ್ ನಿದಿಗೆ ಬಳಸಿದ್ದೇವೆ ಎಂದು ಅವರು ತಿಳಿಸಿದರು.

ರೈತರ ಬೆಳೆಗಳಿಗೆ ವೈಜ್ಞಾನಿಕ ರೀತಿಯಲ್ಲಿ ಬೆಂಬಲ ಬೆಲೆ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ. ತೊಗರಿ ಬೆಳೆಗೆ 2013-14ರಲ್ಲಿ ಪ್ರತಿ ಹೆಕ್ಟೇಟರಗೆ 4,300ರಷ್ಟು ಬೆಂಬಲ ಬೆಲೆ ನೀಡಿದ್ದು, 2025-26ನೇ ಸಾಲಿನಲ್ಲಿ ಬೆಂಬಲ ಬೆಲೆಯ ಮೊತ್ತವನ್ನು ಶೇ.84ರಷ್ಟು ಹೆಚ್ಚಿಸಿ ಪ್ರತಿ ಹೆಕ್ಟರಗೆ 8000 ರೂ. ನಿಗದಿ ಮಾಡಿದ್ದೇವೆ. ಹೆಸರು ಬೆಳೆಗೆ ಬೆಂಬಲ ಬೆಲೆಯ ಮೊತ್ತವನ್ನು ಶೇ.81ರಷ್ಟು ಹೆಚ್ಚಿಸಿ ಪ್ರತಿ ಹೆಕ್ಟರಗೆ 8800 ರೂ.ನಿಗದಿ ಮಾಡಿದ್ದೇವೆ. ಈ ಬೆಳೆಗೆ ಈ ಹಿಂದೆ ಪ್ರತಿ ಹೆಕ್ಟರಗೆ 4500 ನಿಗದಿಪಡಿಸಲಾಗಿತ್ತು ಎಂದು ಅವರು ವಿವರಿಸಿದರು.

ನೀತಿ ಆಯೋಗದಿಂದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಹತ್ವಾಕಾಂಕ್ಷಿ ಜಿಲ್ಲಾ ಕಾರ್ಯಕ್ರಮಗಳು ಜಾರಿಯಲ್ಲಿವೆ. ಈ ಭಾಗದಲ್ಲಿನ ಮಹತ್ವಾಕಾಂಕ್ಷಿ ಯೋಜನೆಗಳು ಮತ್ತು ಇತರೆ ವಿಷಯಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ರಸ್ತೆ, ಕುಡಿಯುವ ನೀರು, ಬೀದಿ ದೀಪ ಅಳವಡಿಕೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯವು ಅಚ್ಚುಕಟ್ಟಾಗಿ ಆಗಬೇಕಿದೆ. ನೀತಿ ಆಯೋಗ ನಡೆಸಿದ ಆ್ಯಸ್ಪೈರೇಷನಲ್ ಜಿಲ್ಲಾ ರ‍್ಯಾಂಕಿಂಗ್‌ನಲ್ಲಿ 2020-23ನೇ ಸಾಲಿನಲ್ಲಿ ರಾಯಚೂರು ಜಿಲ್ಲೆಗೆ ಟಾಪ್ ಒನ್ ಸ್ಥಾನ ಮತ್ತು ದಕ್ಷಿಣ ಭಾರತದಲ್ಲಿ ಮಸ್ಕಿ ತಾಲೂಕಿಗೆ ಟಾಪ್ 8ನೇ ಸ್ಥಾನ ಲಭಿಸಿದೆ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕಿನ ನಬಾರ್ಡ ಅಧ್ಯಕ್ಷರಾದ ಶಾಜಿ ಕೆ.ವಿ., ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಸಿಇಓ ಈಶ್ವರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಮುಖಂಡರಾದ ವೆಂಕಟರಾವ್ ನಾಡಗೌಡ, ಕೆ.ವಿರುಪಾಕ್ಷಪ್ಪ, ಜವಳಗೇರಾ ಗ್ರಾಪಂ ಅಧ್ಯಕ್ಷರಾದ ನಾಗಲಿಂಗ ಯಮನೂರಪ್ಪ ಹಾಗೂ ಗ್ರಾಪಂನ ಇನ್ನೀತರ ಸದಸ್ಯರು ಮತ್ತು ಇತರರು ಇದ್ದರು. ಶಂಕರ ಪ್ರಕಾಶ ಹಾಗೂ ತಂಡದವರು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X