Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ...

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ರವಿಕುಮಾರ್‌ ಅವರ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಅಂಜುಮನ್‌ ಸಮಿತಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ31 May 2025 6:25 PM IST
share
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ರವಿಕುಮಾರ್‌ ಅವರ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ  ಅಂಜುಮನ್‌ ಸಮಿತಿ ಒತ್ತಾಯ

ರಾಯಚೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿರುವ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್‌ ಅವರ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಅಂಜುಮನ್‌ ರಾಯಚೂರು ಸಮಿತಿ ಒತ್ತಾಯಿಸಿದೆ.

ಈ ಕುರಿತು ಅಂಜುಮನ್‌ ರಾಯಚೂರು ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದೆ.

ಕಲಬುರಗಿ ನಗರದಲ್ಲಿ ಬಿಜೆಪಿ ವತಿಯಿಂದ ನಡೆದ ಹೋರಾಟದ ಸಂದರ್ಭದಲ್ಲಿ ಎನ್.ರವಿಕುಮಾರ್‌ ಕಲಬುರಗಿ ಜಿಲ್ಲಾಧಿಕಾರಿಗಳ ಕುರಿತು ಅಸಂವಿಧಾನಿಕ ಪದ ಬಳಕೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ.

ಸಂವಿಧಾನಬದ್ದವಾಗಿ ನೇಮಕಗೊಂಡ ಅಧಿಕಾರಿಗೆ ಎನ್‌.ರವಿಕುಮಾರ್‌ ಉದ್ದೇಶಪೂರ್ವಕವಾಗಿ ಅವಮಾನ ಮಾಡಿರುತ್ತಾರೆ. ಪ್ರತಿಭಟನೆ ನಡೆಯುತ್ತಿರುವ ವಿಷಯಕ್ಕೂ ಜಿಲ್ಲಾಧಿಕಾರಿಗೂ ಯಾವುದೇ ಸಂಬಂದವಿಲ್ಲದಿದ್ದರೂ ಅನಗತ್ಯವಾಗಿ ಅವರನ್ನು ಎಳೆದು ತಂದಿರುತ್ತಾರೆ. ಇಂತಹವರು ವಿಧಾನ ಪರಿಷತ್ ಸದಸ್ಯರಾಗಿರಲು ಯೋಗ್ಯರಲ್ಲ ಎನ್ನುವುದು ನಮ್ಮ ನಂಬಿಕೆಯಾಗಿದೆ ಎಂದು ಹೇಳಿದರು.

ಎನ್.ರವಿಕುಮಾರ್‌ ಅವರು ಈ ರೀತಿ ಹೇಳಿಕೆ ನೀಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಕೂಡ ಇಂತಹ ಕೋಮು ಪ್ರಚೋದಿತ ಹೇಳಿಕೆಗಳನ್ನು ನೀಡಿಕೊಂಡು ರಾಜಕೀಯ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಬಿಜೆಪಿ ನಾಯಕರು ದೇಶದಲ್ಲಿ ಇತ್ತೀಚೆಗೆ ಮುಸ್ಲಿಂ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಹಲವು ಹೇಳಿಕೆಗಳು ನೀಡಿರುತ್ತಾರೆ. ರಾಜ್ಯಪಾಲರಾದ ತಾವು ಸಂವಿಧಾನಬದ್ದವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ರಕ್ಷಣೆಗೆ ಬರಬೇಕು ಹಾಗೂ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿರುವ ಮತ್ತು ಅಧಿಕಾರಿಗಳನ್ನು ಬೆದರಿಸುತ್ತಿರುವ ಎನ್.ರವಿಕುಮಾರ್‌ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದುಪಡಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮುಖಂಡರಾದ ಸೈಯದ್‌ ಅಮೀನುಲ್ ಹಸನ್, ಮುಹಮ್ಮದ್‌ ಉಸ್ಮಾನ , ಶೇಖ್ ಷಾವಲಿ, ಸೈಯದ್ ಟಿಪ್ಪು ಸುಲ್ತಾನ್, ಮುಹ್ಮದ್ ಮೊಹೀನುದ್ದೀನ್ ಉಪಸ್ಥಿತರಿದ್ದರು.

Tags

District MagistrateAnjumana-e-Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X