Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರಿನ 19 ಗ್ರಾಮಗಳನ್ನು ಮಸ್ಕಿಗೆ...

ಸಿಂಧನೂರಿನ 19 ಗ್ರಾಮಗಳನ್ನು ಮಸ್ಕಿಗೆ ಸೇರಿಸುವ ನಿರ್ಧಾರಕ್ಕೆ ವಿರೋಧ : ಕಲಮಂಗಿಯಲ್ಲಿ ʼರಸ್ತೆ ರೋಕೋʼ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2025 5:18 PM IST
share
ಸಿಂಧನೂರಿನ 19 ಗ್ರಾಮಗಳನ್ನು ಮಸ್ಕಿಗೆ ಸೇರಿಸುವ ನಿರ್ಧಾರಕ್ಕೆ ವಿರೋಧ : ಕಲಮಂಗಿಯಲ್ಲಿ ʼರಸ್ತೆ ರೋಕೋʼ ಪ್ರತಿಭಟನೆ

ರಾಯಚೂರು: ಸಿಂಧನೂರು ತಾಲೂಕಿನ ತುರ್ವಿಹಾಳ ಹಾಗೂ ಗುಂಜಳ್ಳಿ ಹೋಬಳಿಯ 19 ಗ್ರಾಮಗಳನ್ನು ಮಸ್ಕಿ ತಾಲೂಕಿಗೆ ಸೇರಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಕರುನಾಡು ಹಸಿರು ಸೇನಾ ಸಂಘ ಹಾಗೂ ಕೆಆರ್‌ಎಸ್ ಪಕ್ಷದ ನೇತೃತ್ವದಲ್ಲಿ ಗುರುವಾರ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ ರಸ್ತೆ ರೋಕೋ ಚಳವಳಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರು ತುರ್ವಿಹಾಳ ಹೋಬಳಿಯ 3 ಪಂಚಾಯತ್‌ಗಳ 11 ಹಳ್ಳಿಗಳು ಹಾಗೂ ಗುಂಜಳ್ಳಿ ಹೋಬಳಿಯ 8 ಹಳ್ಳಿಗಳನ್ನು ಸೇರಿಸಿ ಒಟ್ಟು 19 ಹಳ್ಳಿಗಳನ್ನು ಮಸ್ಕಿ ತಾಲೂಕಿಗೆ ಸೇರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ಈ ಕ್ರಮವನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

ಯಾವುದೇ ಗ್ರಾಮಗಳನ್ನು ಮತ್ತೊಂದು ತಾಲೂಕಿಗೆ ಸೇರಿಸಬೇಕಾದರೆ ಗ್ರಾಮ ಪಂಚಾಯತ್‌ ಸದಸ್ಯರು, ಅಧ್ಯಕ್ಷರು ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಬೇಕಾಗುತ್ತದೆ. ಆದರೆ ಯಾವುದೇ ಚರ್ಚೆ ನಡೆಸದೇ ಏಕಪಕ್ಷೀಯವಾಗಿ ಪತ್ರ ಬರೆದು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತುರ್ವಿಹಾಳ ಮತ್ತು ಗುಂಜಳ್ಳಿ ಹೋಬಳಿಯ ಕೆಲ ಗ್ರಾಮಗಳು ಮಸ್ಕಿ ತಾಲ್ಲೂಕಿಗೆ ಸುಮಾರು 60 ಕಿ.ಮೀ ದೂರದಲ್ಲಿವೆ. ಅಲ್ಲಿಗೆ ಹೋಗಲು ಸಾರಿಗೆ ಸೌಲಭ್ಯ ಸರಿಯಾಗಿ ಇಲ್ಲ. ಆಡಳಿತಾತ್ಮಕವಾಗಿ ಸಿಂಧನೂರೇ ಸೂಕ್ತ ಎಂದು ಗ್ರಾಮಸ್ಥರ ಮನವಿ. ಇದನ್ನು ಲೆಕ್ಕಿಸದೆ ಮಸ್ಕಿಗೆ ಸೇರಿಸುವ ಕ್ರಮ ಅನ್ಯಾಯಕರ ಎಂದು ಪ್ರತಿಭಟನಾಕಾರರು ದೂರಿದರು.

ಸಿಂಧನೂರಿನ 19 ಗ್ರಾಮಗಳನ್ನು ಮಸ್ಕಿಗೆ ಸೇರಿಸುವಂತೆ ಶಾಸಕ ಹಂಪನಗೌಡ ಬಾದರ್ಲಿ ಸಲ್ಲಿಸಿದ ಪತ್ರದ ಹಿನ್ನೆಲೆಯಲ್ಲಿ, ಅಪರ ಜಿಲ್ಲಾಧಿಕಾರಿಗಳು ಮಸ್ಕಿ ಹಾಗೂ ಸಿಂಧನೂರು ತಹಶೀಲ್ದಾರರಿಗೆ ಕೂಲಂಕುಷವಾಗಿ ವಿಚಾರಣೆ ನಡೆಸಿ, ಎರಡು ದಿನಗಳಲ್ಲಿ ಸಂಪೂರ್ಣ ದಾಖಲೆಗಳೊಂದಿಗೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಇನ್ನೊಂದೆಡೆ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಈ ಕ್ರಮವನ್ನು ವಿರೋಧಿಸಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಒಂದೇ ಪಕ್ಷದ ಇಬ್ಬರು ಶಾಸಕರ ಭಿನ್ನ ನಿಲುವು ರಾಜಕೀಯವಾಗಿ ಬಿಸಿ ಚರ್ಚೆಗೆ ಗ್ರಾಸವಾಗುತ್ತಿದೆ. ಇದರ ನಡುವೆ ಗ್ರಾಮಸ್ಥರ ಹಿತಾಸಕ್ತಿ ಹಾಳಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ಈ ನಿರ್ಧಾರ ಹಿಂಪಡೆದು, ಗ್ರಾಮಗಳನ್ನು ಸಿಂಧನೂರಲ್ಲೇ ಮುಂದುವರೆಸಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಪ್ರತಿಭಟನೆಯಲ್ಲಿ ಕರುನಾಡು ಹಸಿರು ಸೇನಾ ಸಂಘದ ಅಧ್ಯಕ್ಷ ಬಸವಂತರಾಯ, ಉಪಾಧ್ಯಕ್ಷ ದೇವರೆಡ್ಡಿ, ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ನಿರುಪಾದಿ ಗೋಮರ್ಸಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X