Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಪ್ರಜ್ವಲ್ ರೇವಣ್ಣ ಪ್ರಕರಣ | ರಾಹುಲ್...

ಪ್ರಜ್ವಲ್ ರೇವಣ್ಣ ಪ್ರಕರಣ | ರಾಹುಲ್ ಗಾಂಧಿಗೆ ತಕ್ಷಣವೇ ಎಸ್‌ಐಟಿ ನೊಟೀಸ್ ನೀಡಬೇಕು : ಎಚ್‌ಡಿಕೆ ಆಗ್ರಹ

"ಟೆಂಟ್‌ನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವರೇ ಪೆನ್‍ಡ್ರೈವ್ ಬಿಟ್ಟಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ3 May 2024 9:03 PM IST
share
ಪ್ರಜ್ವಲ್ ರೇವಣ್ಣ ಪ್ರಕರಣ | ರಾಹುಲ್ ಗಾಂಧಿಗೆ ತಕ್ಷಣವೇ ಎಸ್‌ಐಟಿ ನೊಟೀಸ್ ನೀಡಬೇಕು : ಎಚ್‌ಡಿಕೆ ಆಗ್ರಹ

ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಎಐಸಿಸಿ ಮುಖಂಡ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ ನೊಟೀಸ್ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಇಷ್ಟು ಕರಾರುವಕ್ಕಾಗಿ, ಅಂಕಿ-ಅಂಶಗಳ ಸಮೇತ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ. ಈ ಸರಕಾರಕ್ಕೆ ಗಂಡಸ್ತನ, ತಾಕತ್ತು ಎನ್ನುವುದು ಇದ್ದರೆ ಈ ಕೂಡಲೇ ಆತನಿಗೆ ತನಿಖಾ ದಳದಿಂದ ಕೂಡಲೇ ನೋಟಿಸ್ ಕೊಡಿಸಬೇಕು. ದೇಶದ ಮಾಜಿ ಪ್ರಧಾನಿ ಮಗನಾ ಇವನು? ಹಾಗಾದರೆ ಇವನ ಬಳಿ ಎಲ್ಲ ಮಾಹಿತಿಯೂ ಇದೆ ಎಂದಾಯಿತು. ಈತನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಕೊಟ್ಟಿರಬೇಕು. ಅವರನ್ನು ಕರೆದು ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನುವುದನ್ನು ರಾಹುಲ್ ಗಾಂಧಿ ಮಾಧ್ಯಮಗಳ ಮುಂದೆಯೂ ಹೇಳಿದ್ದಾರೆ, ಬಹಿರಂಗ ಸಭೆಯಲ್ಲೂ ಹೇಳಿದ್ದಾರೆ. ಕರೆದು ವಿಚಾರಣೆ ಮಾಡಿ. ಸತ್ಯ ಏನೆಂಬುದು ಹೊರಗೆ ಬರಲಿ. ಮೋದಿ ಬಂದು ಕ್ಷಮೆ ಕೇಳಬೇಕಿತ್ತಂತೆ ಇವನಿಗೆ. ಮೋದಿ ಅವರಿಗೇನು ಕನಸು ಬಿದ್ದಿತ್ತಾ? ಮೊದಲೇ ಮಾಹಿತಿ ಗೊತ್ತಿದ್ದವನು ಇವನ್ಯಾಕೆ ಹೇಳಲಿಲ್ಲ?’ ಎಂದು ಅವರು ವಾಗ್ದಾಳಿ ನಡೆಸಿದರು.

ಬಾಗಲಕೋಟೆಯ ಎಚ್.ವೈ.ಮೇಟಿ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ಚುನಾವಣೆ ಪ್ರಚಾರ ಮಾಡುತ್ತೀರಲ್ಲಾ. ಲಜ್ಜೆ ಆಗುವುದಿಲ್ಲವೇ ನಿಮಗೆ? ನಿಮ್ಮ ಬಳಿ ಎಲ್ಲ ವಿಷಯ ಇತ್ತು ಅಲ್ಲವೇ? ಏಪ್ರಿಲ್ 21ರ ವರೆಗೆ ಯಾಕೆ ಕಾದು ಕೂತಿದ್ದಿರಿ? ಮೇ 7ನೆ ತಾರೀಖು ಮತದಾನ ಮುಗಿದ ಮೇಲೆ ಈ ಪ್ರಕರಣ ಎಲ್ಲಿಗೆ ಹೋಗಿ ಮುಟ್ಟುತ್ತೆ? ನಿಮಗೆ ಬೇಕಿರುವುದು ಮೇ 7ನೆ ತಾರೀಕು ನಡೆಯುವ ಮತದಾನ ಮತ್ತು ಜನರನ್ನು ದಿಕ್ಕು ತಪ್ಪಿಸಿ ರಾಜಕೀಯ ಲಾಭ ಮಾಡಿಕೊಳ್ಳುವುದು, ಅμÉ್ಟೀ ಅಲ್ಲವೇ? ಎಂದು ಅವರು ಕಿಡಿಕಾರಿದರು.

ಟೆಂಟ್‍ನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವನೇ: ಈ ಹಿಂದೆ ನೀನು ಏನೆಲ್ಲಾ ಮಾಡಿದ್ದೆ ಎನ್ನುವುದು ಲೋಕಕ್ಕೆ ಗೊತ್ತು. ಟೆಂಟ್‍ನಲ್ಲಿ ನೀಲಿಚಿತ್ರ ತೋರಿಸಿ ಹಣ ಮಾಡಿದವನು ಆ ವ್ಯಕ್ತಿ. ಆತನಿಗೆ ಅಂತಹ ಅನುಭವ ಮೊದಲಿನಿಂದಲೂ ಇದೆ. ಹಿಂದೊಮ್ಮೆ ಒಬ್ಬ ಶಾಸಕನ ಜೀವನದಲ್ಲಿ ಏನೆಲ್ಲಾ ಆಟ ಆಡಿದ, ಹೆಣ್ಣುಗಳನ್ನು ಹೇಗೆಲ್ಲಾ ಬಳಸಿಕೊಂಡ ಎನ್ನುವುದು ಗೊತ್ತಿದೆ. ಪೆನ್‍ಡ್ರೈವ್ ಅನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾನೆ. ಅಂತಹ ಕೆಟ್ಟ ಅನುಭವ ಇರುವವನೇ ಪೇನ್‍ಡ್ರೈವ್ ಬೀದಿಗೆ ಬಿಟ್ಟಿದ್ದಾರೆ ಎಂದು ಅವರು ಟೀಕಿಸಿದರು.

ನನ್ನ ತಂದೆ-ತಾಯಿ ಜೀವ ಮುಖ್ಯ: ನನಗೆ ನನ್ನ ತಂದೆ-ತಾಯಿ ಆರೋಗ್ಯ ಮುಖ್ಯ. ನನ್ನ ತಂದೆಯವರ ಅರವತ್ತು ವರ್ಷಗಳ ರಾಜಕೀಯ ಜೀವನ ಹೇಗಿತ್ತು ಎನ್ನುವುದು ನನಗೆ ಗೊತ್ತಿದೆ. ನನ್ನ ತಾಯಿ ಯಾವ ಸಂಸ್ಕೃತಿಯಲ್ಲಿ ಬದುಕಿದ್ದಾರೆ ಎನ್ನವುದು ನನಗೆ ಗೊತ್ತಿದೆ. ಅವರಿಬ್ಬರ ಜೀವಕ್ಕೆ ಅಪಾಯವಾಗಬಾರದು. ಅವರ ಜೀವಕ್ಕೆ ತೊಂದರೆ ಆಗಬಾರದು, ಮಗನಾಗಿ ಧೈರ್ಯ ಹೇಳಲು ಎರಡು ದಿನದಿಂದ ಅವರ ಮನೆಗೆ ಹೋಗಿದ್ದೆ. ಇವತ್ತು ನೀವು ಅವರನ್ನು ಟೀಕೆ ಮಾಡುತ್ತಿದ್ದೀರಿ. ಅಷ್ಟು ವರ್ಷ ಅವರ ಜತೆ ರಾಜಕೀಯ ಮಾಡಿ ಹೋಗಿದ್ದೀರಿ. ಅವರು ಯಾವ ರೀತಿ ಬದುಕಿದರು ಎಂಬುದನ್ನು ಮರೆತುಬಿಟ್ಟಿದ್ದೀರಿ. ನಿಮ್ಮ ಯೋಗ್ಯತೆಗೆ ತಂದೆ-ತಾಯಿ ಲೆಕ್ಕಕ್ಕೆ ಇಲ್ಲದಿರಬಹುದು. ನೀವು ಆ ಸಂಸ್ಕೃತಿಯಿಂದ ಬಂದವರಲ್ಲ ಎಂದು ಅವರು, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X