Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಪ್ರಧಾನಿ ಮೋದಿ ಅವರು ಅತ್ಯಂತ...

ಪ್ರಧಾನಿ ಮೋದಿ ಅವರು ಅತ್ಯಂತ ದುರ್ಬಲರಾಗಿದ್ದಾರೆ : ಸಚಿವ ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ15 Oct 2025 10:15 PM IST
share
ಪ್ರಧಾನಿ ಮೋದಿ ಅವರು ಅತ್ಯಂತ ದುರ್ಬಲರಾಗಿದ್ದಾರೆ : ಸಚಿವ ಸಂತೋಷ್ ಲಾಡ್

ರಾಯಚೂರು: ಪ್ರಧಾನಿ ಮೋದಿ ಅವರು ಅತ್ಯಂತ ದುರ್ಬಲರಾಗಿದ್ದಾರೆ. 11 ವರ್ಷ ಆಡಳಿತ ನಡೆಸಿದರೂ, ತಮ್ಮನ್ನು ಹೊಗಳಿಸಿಕೊಳ್ಳಲು ಸೆಲೆಬ್ರಿಟಿಗಳಿಂದ ‘ಮೋದಿ ಹೈ ತೋ ಮುಮ್ಕಿನ್ ಹೈ’ ಎಂದು ಹಾಡಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯಾಗಿ ಪ್ರತಿ ರಾಜ್ಯದ ಚುನಾವಣೆಗೆ 30-40 ಬಾರಿ ಭೇಟಿ ನೀಡುತ್ತಾರೆ. ಕೆಲಸ ಮಾಡಿದರೆ ಅಭಿವೃದ್ಧಿಯ ಹೆಸರಿನಲ್ಲಿ ಮತ ಕೇಳಬೇಕು, ಜನ ಸಹ ಒಳ್ಳೆಯ ಕೆಲಸಕ್ಕೆ ಮತ ಹಾಕುತ್ತಾರೆ. ಆದರೆ ಈಗ ಚುನಾವಣೆ ಆಯೋಗವೂ ಅವರ ಪರ ಕೆಲಸ ಮಾಡುತ್ತಿದೆ. ಬಿಹಾರ ಚುನಾವಣೆಗೆ ಹಣದ ಹೊಳೆ ಹರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದು ಟೀಕಿಸಿದರು.

ಆರೆಸ್ಸೆಸ್‌ ನಿಷೇಧ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಆರೆಸ್ಸೆಸ್‌ ಬ್ಯಾನ್ ಮಾಡಿದವರೇ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರು. ಇತಿಹಾಸವನ್ನು ಬಿಜೆಪಿಯವರು ಗಮನಿಸಲಿ. ಆರೆಸ್ಸೆಸ್‌ ವಿರುದ್ಧ ವೈಯಕ್ತಿಕವಾಗಿ ಮಾತನಾಡಿಲ್ಲ. ಸೈದ್ಧಾಂತಿಕ ವಿಚಾರವಾಗಿ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಂದ ಬೆದರಿಕೆ ಕರೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ನಾಯಕರು ಅವರೊಂದಿಗೆ ನಿಂತಿದ್ದಾರೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಲಿದೆ. ಅವರಿಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.

ನವೆಂಬರ್‌ ಕ್ರಾಂತಿಯ ಕುರಿತು ಪ್ರತಿಕ್ರಿಯಿಸಿದ ಅವರು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಡ ಕೇಂದ್ರದ ಮೇಲಿದೆ. ಅವರ ಓಲೈಕೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕೇಂದ್ರ ಸರ್ಕಾರ 50 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಆಂಧ್ರಪ್ರದೇಶಕ್ಕೆ ನೀಡಿದೆ. ದೇಶದಲ್ಲಿ ಐದು ಸೆಮಿ ಕಂಡಕ್ಟರ್ ಗಳಲ್ಲಿ ಪ್ರತಿಯೊಂದು ಯೋಜನೆ 5 ಸಾವಿರ ಕೋಟಿ ಇದೆ. ನಾಲ್ಕು ಗುಜರಾತಿಗೆ ತೆಗೆದುಕೊಂಡು ಹೋಗಿದ್ದಾರೆ. ʼಸಬ್ ಕಾ ಸಾತ್ ಸಬ್ ಕಾ ವಿಕಾಸ್ʼ ಎಲ್ಲಿದೆ ಅದು ಕೇವಲ ಭಾಷಣಕ್ಕೆ ಸೀಮಿತ, ಕೇಳುವರು ಯಾರು ಎಂದು ಪ್ರಶ್ನಿಸಿದರು.

ಕಾರ್ಮಿಕರ ಕಲ್ಯಾಣಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಒಂದು ರೂಪಾಯಿ ಸೆಸ್‌ನಿಂದ ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸುವ ಯೋಜನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎಪಿಎಂಸಿ ಉಪಾಧ್ಯಕ್ಷ ಬಶೀರ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X