Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಎಸ್‌ಐಆರ್ ರದ್ದುಪಡಿಸಲು ಆಗ್ರಹಿಸಿ...

ಎಸ್‌ಐಆರ್ ರದ್ದುಪಡಿಸಲು ಆಗ್ರಹಿಸಿ ಸೆ.9ರಂದು ರಾಯಚೂರಿನಲ್ಲಿ ಪ್ರತಿಭಟನೆ : ಕೆ.ಶಾಂತಪ್ಪ

ವಾರ್ತಾಭಾರತಿವಾರ್ತಾಭಾರತಿ6 Oct 2026 7:46 PM IST
share
ಎಸ್‌ಐಆರ್ ರದ್ದುಪಡಿಸಲು ಆಗ್ರಹಿಸಿ ಸೆ.9ರಂದು ರಾಯಚೂರಿನಲ್ಲಿ ಪ್ರತಿಭಟನೆ : ಕೆ.ಶಾಂತಪ್ಪ

ರಾಯಚೂರು: ಸ್ವತಂತ್ರ ಸಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಸೆ.9ರಂದು ಇಂಡಿಯಾ ಒಕ್ಕೂಟ ಹಾಗೂ ಮತ ಕಾವಲು ಸಮಿತಿಯಿಂದ ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ತಿಳಿಸಿದರು.

ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ಇಂಡಿಯಾ ಒಕ್ಕೂಟ, ಮತ ಕಾವಲು ಸಮಿತಿ ಹಾಗೂ ಪ್ರಗತಿಪರ ಮತ್ತು ಎಡಪಕ್ಷಗಳನ್ನು ಒಳಗೊಂಡ ಸಮಿತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಒಂದು ಸಮುದಾಯ ಹಾಗೂ ನಿರ್ದಿಷ್ಟ ಜನರನ್ನು ಗುರಿಯಾಗಿಸಿಕೊಂಡು ಕೇಂದ್ರೀಕೃತ ವ್ಯವಸ್ಥೆಯ ಮೂಲಕ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಈ ಕುರಿತು ಈಗಾಗಲೇ ಹಲವು ತನಿಖಾ ವರದಿಗಳಿಂದ ವಿಷಯ ಬಹಿರಂಗವಾಗಿದೆ ಎಂದು ಹೇಳಿದ ಅವರು, ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಪಕ್ಷಪಾತದಿಂದ ನಡೆದುಕೊಳ್ಳುತ್ತಿದೆ. ಮುಸ್ಲಿಮರು, ದಲಿತರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸಮಾನ ಅಧಿಕಾರ ಹೊಂದಿರುವ ಆಯುಕ್ತರಲ್ಲಿಯೇ ಅಸಮಾನತೆ ಹಾಗೂ ಭಿನ್ನಮತ ಸ್ಫೋಟಗೊಂಡಿದೆ. ಮತದಾರರ ನಂಬಿಕೆ ಕಳೆದುಕೊಂಡಿರುವ ಆಯುಕ್ತರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಸೆ.9ರಂದು ನಗರದ ನೇತಾಜಿ ವೃತ್ತದಿಂದ ತೀನ್ ಖಂದಿಲ್ ಮಾರ್ಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಹೋರಾಟ ರ್ಯಾಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮತ ಕಾವಲು ಸಮಿತಿಯ ಮುಖಂಡ ಮಾರೆಪ್ಪ ಹರವಿ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯನ್ನು ಆರಂಭದಿಂದಲೂ ನಾಗರಿಕ ಹಾಗೂ ಪ್ರಗತಿಪರ ಸಂಘಟನೆಗಳು ವಿರೋಧಿಸುತ್ತಿದ್ದರೂ ಕೇಂದ್ರ ಚುನಾವಣಾ ಆಯೋಗ ಯಾವುದೇ ಪೂರ್ವತಯಾರಿ ಇಲ್ಲದೆ ಪ್ರಕ್ರಿಯೆ ಕೈಗೊಂಡಿದೆ ಎಂದು ಆರೋಪಿಸಿದರು.

ಎಸ್‌ಐಆರ್ ಒಂದು ಪಕ್ಷದ ಪರವಾಗಿದೆ. ಅರ್ಹ ಮತದಾರರ ಸಂಖ್ಯೆಯನ್ನು ಕಡಿಮೆ ಮಾಡಿ ಒಂದು ಪಕ್ಷವನ್ನು ಅಧಿಕಾರಕ್ಕೆ ತರಲು ಹುನ್ನಾರ ನಡೆಸಲಾಗುತ್ತಿದೆ. ಈ ಕುರಿತು ಹಲವು ಬಾರಿ ದೂರು ನೀಡಿದರೂ ಚುನಾವಣಾ ಆಯೋಗ ಸ್ಪಂದಿಸದಿರುವುದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಹಿರಿಯ ಸದಸ್ಯ ಜಯಣ್ಣ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ, ಮತ ಕಾವಲು ಸಮಿತಿಯ ಮುಖಂಡರಾದ ಎಂ.ಆರ್. ಭೇರಿ, ಮುಶ್ತಾಕ್ ಅಹ್ಮದ್, ಜಮಾತೆ ಇಸ್ಲಾಂ ಹಿಂದ್ ಸ್ಥಾನಿಕ ಅಧ್ಯಕ್ಷ ಅಸೀಮುದ್ದೀನ್ ಅಖ್ತರ್, ಖಾಜಾ ಅಸ್ಲಂ ಅಹ್ಮದ್, ಆಂಜನೇಯ ಕುರುಬದೊಡ್ಡಿ, ಎನ್. ಶ್ರೀನಿವಾಸರೆಡ್ಡಿ, ಕೆ.ಜಿ. ವೀರೇಶ, ಜಯವಂತರಾವ್ ಪತಂಗೆ, ನರಸಿಂಹಲು ಮಾಡಗಿರಿ, ಅಮರೇಗೌಡ ಹಂಚಿನಾಳ, ಜಾನ್ ವೆಸ್ಲಿ, ತಾಯಣ್ಣ, ಜಿ. ಶಿವಮೂರ್ತಿ, ಬಸವರಾಜ, ಶರಣಕುಮಾರ ಮುದ್ದಮಗುಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Tags

SIRRaichurprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X