Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಿ,‌ ಸಾವಿನ‌ ಪ್ರಮಾಣ ನಿಯಂತ್ರಣ: ಸಚಿವ ದಿನೇಶ್ ಗುಂಡುರಾವ್

ವಾರ್ತಾಭಾರತಿವಾರ್ತಾಭಾರತಿ22 Jan 2025 2:17 PM IST
share
ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಿ,‌ ಸಾವಿನ‌ ಪ್ರಮಾಣ ನಿಯಂತ್ರಣ: ಸಚಿವ ದಿನೇಶ್ ಗುಂಡುರಾವ್

ರಾಯಚೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ‌ನಮ್ಮ ಧ್ಯೆಯವಾಗಿದೆ. ಬಾಣಂತಿಯರ ಸಾವು ನಿಯಂತ್ರಣಕ್ಕೆ ಅಭಿಯಾನ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅವರಿಂದು ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಪ್ರಸ್ತುತ ಬಾಣಂತಿಯರ ಸಾವಿನ ಪ್ರಮಾಣ 1ಲಕ್ಷಕ್ಕೆ 60 ಇದೆ. ಈ ಪ್ರಮಾಣವನ್ನು ಕಡಿಮೆ ಮಾಡಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು.

ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ವತಿಯಿಂದ ಅಭಿಯಾನ ಹಮ್ಮಿಕೊಳ್ಳಲಾಗುವುದು‌ ಎಂದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ಮುಖ್ಯ ವೈದ್ಯಾಧಿಕಾರಿ, ತಜ್ಞರು ಹಾಗೂ ಶುಶ್ರೂಷಕ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೆಶನ ನೀಡಲಾಗಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಂಜೂರು, ಅಭಿವೃದ್ಧಿ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ರೂ.900ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಬಳಿಕ ಸ್ಥಳೀಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗ, ಶಸ್ತ್ರಚಿಕಿತ್ಸೆ ವಿಭಾಗಕ್ಕೆ‌‌ ಭೇಟಿ ನೀಡಿ ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಮಾನ್ವಿ ಶಾಸಕ ಜಿ.ಹಂಪಯ್ಯ ನಾಯಕ ಸಹುಕಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಎಸ್ ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಗೌಡ ಮುಷ್ಟೂರು, ಮುಖ್ಯ ವೈದ್ಯಾಧಿಕಾರಿ ಡಾ.ಡಿ.ಶರಣಪ್ಪ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X