Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಪರಿತ್ಯಕ್ತ 2 ಕಂದಮ್ಮಗಳಿಗೆ...

ರಾಯಚೂರು | ಪರಿತ್ಯಕ್ತ 2 ಕಂದಮ್ಮಗಳಿಗೆ ಸರಕಾರಿ ದತ್ತು ಕೇಂದ್ರದಲ್ಲಿ ನಾಮಕರಣ

ವಾರ್ತಾಭಾರತಿವಾರ್ತಾಭಾರತಿ6 Nov 2025 5:34 PM IST
share
ರಾಯಚೂರು | ಪರಿತ್ಯಕ್ತ 2 ಕಂದಮ್ಮಗಳಿಗೆ ಸರಕಾರಿ ದತ್ತು ಕೇಂದ್ರದಲ್ಲಿ ನಾಮಕರಣ

ರಾಯಚೂರು : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ‌ ಮತ್ತು ಸರಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ದತ್ತು ಸಂಸ್ಥೆಯ ಎರಡು ಕಂದಮ್ಮಗಳಿಗೆ ನಾಮಕರಣ ಕಾರ್ಯಕ್ರಮವು ನ.6ರಂದು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

ಎರಡು ತಿಂಗಳ ಹಿಂದೆ ಕಲ್ಮಲ ಗ್ರಾಮದ ಹತ್ತಿರ ರಸ್ತೆ ಪಕ್ಕದಲ್ಲಿ ಸಿಕ್ಕಿದ್ದ ಪರಿತ್ಯಕ್ತ ಗಂಡು ಮಗುವನ್ನು ಹಾಗೂ ದೇವದುರ್ಗ ತಾಲೂಕಿನ ಗೋಪಾಲಪುರ ಗ್ರಾಮದ ಹತ್ತಿರ ಸಿಕ್ಕಿದ್ದ ಪರಿತ್ಯಕ್ತ ಹೆಣ್ಣು ಮಗುವನ್ನು ಸಾರ್ವಜನಿಕರ ಸಹಕಾರದಿಂದ ರಕ್ಷಿಸಿ ಸದ್ಯಕ್ಕೆ ಸರ್ಕಾರಿ ದತ್ತು ಸ್ವೀಕಾರ ಕೇಂದ್ರದಲ್ಲಿ ಪಾಲನೆ ಮತ್ತು ಪೋಷಣೆ ಮಾಡಲಾಗುತ್ತಿದ್ದು, ಈ ಎರಡು ಮಕ್ಕಳಿಗೆ ನಾಮಕರಣ ಕಾರ್ಯಕ್ರಮವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಮಕ್ಕಳ ಪಾಲನಾ ಕೇಂದ್ರಗಳ ಅಧೀಕ್ಷಕರು ಮತ್ತು ಸಿಬ್ಬಂದಿ ಅತ್ಯಂತ ಸಂಭ್ರಮದಿಂದ ನೆರವೇರಿಸಿದರು.

ಎಲ್ಲಾ ಸಿಬ್ಬಂದಿಯು ತಮ್ಮ ಮನೆಯ ಕಾರ್ಯಕ್ರಮದಂತೆ ಹಬ್ಬದ ರೀತಿಯಲ್ಲಿ ಹೊಸ ಉಡುಗೆ ಧರಿಸಿ ಆಗಮಿಸಿದ್ದರು. ದತ್ತು ಕೇಂದ್ರವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಸಿಬ್ಬಂದಿಯು ನಾಮಕರಣದ ಹಾಡುಗಳನ್ನು ಹೇಳಿದರು.

ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅಮರೇಶ್ ಹಾವಿನ ಅವರು ಮಕ್ಕಳಿಗೆ ನಾಮಕರಣ ಮಾಡಿದರು. ಯಾರೇ ಸಾರ್ವಜನಿಕರು ಮಕ್ಕಳು ತಮಗೆ ಬೇಡವದಲ್ಲಿ ಅಂತ ಮಕ್ಕಳನ್ನು ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡುವ ಮೂಲಕ ಅಥವಾ ಮಕ್ಕಳನ್ನು ಮಮತೆಯ ತೊಟ್ಟಿಲಿಗೆ ಹಾಕುವ ಮೂಲಕ ಮಕ್ಕಳನ್ನು ದತ್ತು ಸಂಸ್ಥೆಗೆ ಒಪ್ಪಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ಬಿಸಾಡಬಾರದು ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.

ಮಕ್ಕಳನ್ನು ಕಾನೂನು ಪ್ರಕಾರ ಮಾತ್ರ ದತ್ತು ಪಡೆಯಬೇಕು. ಮಕ್ಕಳ ಅಕ್ರಮ ಮಾರಾಟ ಮತ್ತು ಅಕ್ರಮವಾಗಿ ದತ್ತು ಪಡೆಯುವುದು ಕಾನೂನು ಬಾಹಿರ ಅಪರಾಧವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಸುದರ್ಶನ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಮಂಗಳಾ ಹೆಗಡೆ ಹಾಗೂ ಸದಸ್ಯರು ಹಾಗೂ ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಭಾರತಿ ನಾಯಕ, ರಾಧಾಬಾಯಿ, ಬಾಲಕರ ಬಾಲ ಮಂದಿರದ ಅಧೀಕ್ಷಕ ನಾಗರಾಜ್, ಶೇಖ್ ಮೆಹಬೂಬ್ ಹಾಗೂ ಸಿಬ್ಬಂದಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X