Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಯಲಗಟ್ಟ, ಪಲಕನಮರಡಿ...

ರಾಯಚೂರು | ಯಲಗಟ್ಟ, ಪಲಕನಮರಡಿ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ18 Sept 2025 12:26 PM IST
share
ರಾಯಚೂರು | ಯಲಗಟ್ಟ, ಪಲಕನಮರಡಿ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಮನವಿ

ರಾಯಚೂರು : ಸಿ.ಎಸ್.ಆರ್. ಅನುದಾನದಡಿ ಯಲಗಟ್ಟ, ಪಲಕನಮರಡಿ ಗ್ರಾಮಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿಯ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದಗಣಿ ರೋಡಲಬಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಗಟ್ಟ ಗ್ರಾಮದಲ್ಲಿ ಊಟಿ ಚಿನ್ನದ ಗಣಿಯಿಂದ ಹಟ್ಟಿ ಚಿನ್ನದ ಗಣಿಗೆ ಕಚ್ಚಾ ಅಧಿರು ಸಾಗಾಟ ಮಾಡುವ ಲಾರಿಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಸ್ಥಳೀಯರು ತಕ್ಷಣವೇ ರಸ್ತೆಗಳನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿದರು.

ಅರಕೇರಾ ತಾಲ್ಲೂಕಿನ ಊಟಿ ಚಿನ್ನದಗಣಿ ವ್ಯಾಪ್ತಿಯ ಪಲಕನಮರಡಿ ಗ್ರಾಮದಲ್ಲಿ ಶೈಕ್ಷಣಿಕ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಿರುವುದರಿಂದ, ಸಿ.ಎಸ್.ಆರ್. ಅನುದಾನದಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಕಾಮಗಾರಿಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಸರಕಾರಿ ಪ್ರೌಢಶಾಲೆ (ಆರ್.ಎಮ್.ಎಸ್.ಎ) ಕಳೆದ ಐದು ವರ್ಷಗಳಿಂದ ಅಸ್ತಿತ್ವದಲ್ಲಿದ್ದು, ಪ್ರಸ್ತುತ 526 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ, ಕಟ್ಟಡವಿಲ್ಲದ ಕಾರಣ ಪ್ರಾಥಮಿಕ ಶಾಲಾ ಪ್ರಾಂಗಣದಲ್ಲಿ ತರಗತಿಗಳು ನಡೆಯುತ್ತಿವೆ. ಮಳೆಗಾಲದಲ್ಲಿ ಮಕ್ಕಳಿಗೆ ಸವಾಲು ಎದುರಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಶಾಲಾ ಕಟ್ಟಡವನ್ನು ಹಾಗೂ ಸರಕಾರಿ ಪ್ರಾಥಮಿಕ ಶಾಲೆಗೆ ಸರಿಯಾದ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ತಕ್ಷಣ ಸಿ.ಎಸ್.ಆರ್. ಅನುದಾನದಲ್ಲಿ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.

ಯಲಗಟ್ಟಾ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡಗಳನ್ನು ವಿಸ್ತರಿಸಿ ಒದಗಿಸಬೇಕು. ಜೊತೆಗೆ ವಿಜ್ಞಾನ ಶಿಕ್ಷಣಕ್ಕಾಗಿ ಪ್ರಯೋಗಾಲಯವನ್ನು ನಿರ್ಮಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಪ್ರದಾನ ಕಾರ್ಯದರ್ಶಿ. ಕಾಂ ನರಸಣ್ಣ ನಾಯಕ, ಜಿಲ್ಲಾ ಉಪಾಧ್ಯಕ್ಷ ಹನುಮಂತ ಪಲಕನಮರಡಿ, ಜಿಲ್ಲಾ ಮುಖಂಡರಾದ ಕಾಂ ನಿಂಗಪ್ಪ ಎಂ ವೀರಾಪೂರು, ಯಲಗಟ್ಟಾ ಗ್ರಾಮದ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ನಾಗಪ್ಪ, ಪ್ರದಾನ ಕಾರ್ಯದರ್ಶಿ ಅಂಬಣ್ಣ ಮಾಲಿ ಪಾಟೀಲ, ಅಲೆಸಾಬ, ಬೀಮೇಶ ಇನ್ನಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X