ರಾಯಚೂರು | ಎಸ್‌ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮುಖಂಡರ ಸಭೆ

ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರೊಂದಿಗೆ ಕುಂದುಕೊರತೆ ಸಭೆ ನಡೆಯಿತು.
ಸಭೆಯಲ್ಲಿ ಮುಖಂಡರು ತಮ್ಮ ಪ್ರದೇಶಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳು, ಪೊಲೀಸ್ ಇಲಾಖೆಯ ಕಾರ್ಯವೈಖರಿ ಹಾಗೂ ಸಮಾಜದಲ್ಲಿ ಉಂಟಾಗುತ್ತಿರುವ ಅಸಮಾಧಾನಗಳ ಕುರಿತು ಅಭಿಪ್ರಾಯ ಹಂಚಿಕೊಂಡರು.
ಎಸ್ಪಿ ಪುಟ್ಟಮಾದಯ್ಯ ಅವರು ಎಲ್ಲರ ಮಾತುಗಳನ್ನು ಆಲಿಸಿ ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜೊತೆಗೆ ಶಾಂತಿ-ಸೌಹಾರ್ದ ಕಾಪಾಡಲು ಎಲ್ಲರೂ ಸಹಕರಿಸಬೇಕೆಂದು ಕರೆ ನೀಡಿದರು.
ಈ ಸಭೆಯಲ್ಲಿ ಹಲವು ಹಳ್ಳಿಗಳು ಮತ್ತು ಪಟ್ಟಣಗಳಿಂದ ಬಂದ ನಾಯಕರು ಭಾಗವಹಿಸಿದ್ದರು.
Next Story





