ರಾಯಚೂರು | ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಸಾಂದರ್ಭಿಕ ಚಿತ್ರ
ರಾಯಚೂರು : ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಸ್ಕಿ ತಾಲ್ಲೂಕಿನ ಎಡದಂಡೆ ಕಾಲುವೆಯಲ್ಲಿ ನಡೆದಿದೆ.
ಮೃತರನ್ನು ಲಿಂಗಸೂಗೂರು ತಾಲ್ಲೂಕಿನ ಮುದಗಲ ಪಟ್ಟಣದ ಯಲ್ಲಾಲಿಂಗ (28) ಹಾಗೂ ವೆಂಕಟೇಶ (28) ಎಂದು ಗುರುತಿಸಲಾಗಿದೆ.
ಇಬ್ಬರೂ ಮುದಗಲ್ ಪಟ್ಟಣದಿಂದ ಮಸ್ಕಿ ನಗರಕ್ಕೆ ಸಿನಿಮಾ ನೋಡಲು ಬಂದಿದ್ದರು. ಸಿನಿಮಾ ನೋಡಿದ ಬಳಿಕ ಈಜಲು ಕಾಲುವೆ ಬಳಿ ತೆರಳಿದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಸ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಶೋಧಕಾರ್ಯ ಕೈಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಒಬ್ಬ ಯುವಕನ ಮೃತದೇಹ ಪತ್ತೆಯಾಗಿದೆ ಮತ್ತು ಇನ್ನೊಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎನ್ನಲಾಗಿದೆ.
Next Story





