ರಾಯಚೂರು | ಭೂ ಅತಿಕ್ರಮಣ ಮಾಡಿ ನಕಲಿ ದಾಖಲೆ ಸೃಷ್ಟಿ ಆರೋಪ : ಅಂಬಾಜಿರಾವ್ ಗಡಿಪಾರು ಮಾಡಲು ಭೀಮ್ ಆರ್ಮಿ ಆಗ್ರಹ

ರಾಯಚೂರು: ಭೂಮಿಯನ್ನು ಅತಿಕ್ರಮಣ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸಾರ್ವಜನಿಕರಿಗೆ ಮೋಸ ಮಾಡಿರುವ ಅಂಬಾಜಿರಾವ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘಟನೆಯಿಂದ ಶುಕ್ರವಾರ ಮಹಾನಗರ ಪಾಲಿಕೆಯ ಉಪ ಆಯುಕ್ತೆ ಸಂತೋಷಿರಾಣಿ ಅವರಿಗೆ ಮನವಿ ಸಲ್ಲಿಸಲಾಯಿತು.
ಯರಮರಸ್ ಸೀಮಾಂತರದಲ್ಲಿರುವ ಸುಗುಣಾಬಾಯಿ ಎಂಬುವವರ ಜಮೀನಿಗೆ ಸಂಬಂಧಿಸಿದಂತೆ ಅಂಬಾಜಿರಾವ್ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದರು.
ಸುಗುಣಾಬಾಯಿ ಅವರ ಹೆಸರಿನಲ್ಲಿ ಹಲವು ವರ್ಷಗಳಿಂದ ಇದ್ದ ಜಮೀನನ್ನು, ಅವರ ಮರಣದ ನಂತರ ಮರಣ ಪ್ರಮಾಣ ಪತ್ರವನ್ನು ದುರುಪಯೋಗಪಡಿಸಿಕೊಂಡು, ಸಂಬಂಧಿಸಿದ ಅಧಿಕಾರಿಗಳ ಸಹಕಾರದೊಂದಿಗೆ ಜಮೀನು ದಾಖಲೆಗಳಲ್ಲಿ ತಮ್ಮ ಹೆಸರನ್ನು ಸೇರಿಸಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದು ದೂರಿದರು.
ಕೂಡಲೇ ಅಂಬಾಜಿರಾವ್ ಮತ್ತು ಕುಟುಂಬದವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಪ್ರವೀಣಕುಮಾರ, ಮಂಜುನಾಥ, ಶಿವು, ಜಿಲಾನಿ, ಪ್ರಶಾಂತ ಸೇರಿದಂತೆ ಅನೇಕರಿದ್ದರು





