Raichur | ಮಾಜಿ ಶಾಸಕ ಸೈಯದ್ ಯಾಸೀನ್ ನಿಧನ

ರಾಯಚೂರು : ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್(74) ಅವರು ಅನಾರೋಗ್ಯದ ಕಾರಣ ಇಂದು (ಜು.12) ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಮಕ್ಕಳು ಹಾಗೂ ಅಪಾರ ಬಂದು-ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಅಯ್ಕೆಯಾಗಿದ್ದರು. 1999 ಹಾಗೂ 2008ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು, ಕೆಪಿಸಿಸಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನಿರ್ವಹಿಸಿದ್ದರು.
Next Story




