Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಬಿಎಸ್‌ಪಿ ಮುಖಂಡನ ಕೊಲೆ...

Raichur | ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ : ಅಮಾಯಕರ ಹೆಸರನ್ನು ಎಫ್‌ಐಆರ್‌ನಿಂದ ಕೈಬಿಡಲು ವಾಲ್ಮೀಕಿ ನಾಯಕ ಸಂಘ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Aug 2026 7:17 PM IST
share
Raichur | ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ : ಅಮಾಯಕರ ಹೆಸರನ್ನು ಎಫ್‌ಐಆರ್‌ನಿಂದ ಕೈಬಿಡಲು ವಾಲ್ಮೀಕಿ ನಾಯಕ ಸಂಘ ಆಗ್ರಹ

ರಾಯಚೂರು: ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಅಮಾಯಕ ವ್ಯಕ್ತಿಗಳ ಹೆಸರನ್ನು ಆರೋಪಿಗಳ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿ, ಅವರ ಹೆಸರನ್ನು ಪ್ರಕರಣದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಪದಾಧಿಕಾರಿಗಳು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರಣಾಂಗ್ಷು ಗಿರಿ ಅವರಿಗೆ ಮನವಿ ಸಲ್ಲಿಸಿದರು.

ಸುಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣವನ್ನು ವಾಲ್ಮೀಕಿ ಸಮುದಾಯ ತೀವ್ರವಾಗಿ ಖಂಡಿಸಿದ್ದು, ಮೃತರ ಕುಟುಂಬದೊಂದಿಗೆ ಸಮಾಜ ನಿಲ್ಲಲಿದೆ. ಪ್ರಕರಣದಲ್ಲಿ ನಿಜವಾದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸಮುದಾಯದ ಯಾವುದೇ ವಿರೋಧವಿಲ್ಲ. ಆದರೆ, ಪ್ರಮುಖ ಆರೋಪಿತರ ಬಂಧನದ ಬಳಿಕ ಪ್ರಕರಣಕ್ಕೆ ಸಂಬಂಧವಿಲ್ಲದ ಐವರು ಅಮಾಯಕರ ಹೆಸರನ್ನು ಆರೋಪಿಗಳ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು.

ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಎಂಟನೇ ಆರೋಪಿಯಾಗಿ ನಮೂದಾಗಿರುವ ಭೀಮರಾಯ ಹದ್ದಿನಾಳ ಅವರಿಗೆ ಪ್ರಕರಣದೊಂದಿಗೆ ಯಾವುದೇ ಸಂಬಂಧ ಇಲ್ಲ. ಅವರು ಹಲವು ವರ್ಷಗಳಿಂದ ರಾಯಚೂರಿನಲ್ಲಿ ವಾಸವಾಗಿದ್ದು, ಕಳೆದ 35 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಸಮಾಜದಲ್ಲಿ ಗೌರವ ಗಳಿಸಿದ್ದಾರೆ. ಅವರ ವಿರುದ್ಧ ದುರುದ್ದೇಶದಿಂದ ಹೆಸರು ಸೇರಿಸಲಾಗಿದೆ ಎಂದು ದೂರಿದರು.

ಅಗತ್ಯವಿದ್ದರೆ ಸಿಡಿಆರ್‌, ಲೈವ್ ಲೊಕೇಷನ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಬೇಕು. ಇದೇ ಪ್ರಕರಣದಲ್ಲಿ ಇನ್ನೂ ಹಲವು ನಿರಪರಾಧಿಗಳ ಹೆಸರನ್ನೂ ಸೇರಿಸಲಾಗಿದ್ದು, ಇದರಿಂದ ಅವರ ದೈನಂದಿನ ಜೀವನಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

ಯಾರೋ ಮಾಡಿದ ತಪ್ಪಿಗೆ ಅಮಾಯಕರು ಶಿಕ್ಷೆಗೆ ಒಳಗಾಗಬಾರದು ಎಂಬುದು ಕಾನೂನಿನ ಮೂಲ ತತ್ವವಾಗಿದೆ. ಹೀಗಾಗಿ ನಿಜವಾದ ಆರೋಪಿಗಳನ್ನು ಹೊರತುಪಡಿಸಿ ದುರುದ್ದೇಶದಿಂದ ಸೇರಿಸಲಾದ ಎಲ್ಲ ಅಮಾಯಕರ ಹೆಸರನ್ನು ಎಫ್‌ಐಆರ್‌ನಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ಇಲ್ಲದಿದ್ದರೆ ಈ ವಿಚಾರವು ಸಮುದಾಯಗಳ ನಡುವೆ ಅನಗತ್ಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಪೊಲೀಸರು ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನಿರಪರಾಧಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್. ರಘುವೀರ ನಾಯಕ, ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ನಾಯಕ, ರಾಮುನಾಯಕ, ನಾರಾಯಣ ನಾಯಕ, ತಾಯಪ್ಪ ನಾಯಕ, ರಂಗಸ್ವಾಮಿ ನಾಯಕ, ಗೋಪಲ ನಾಯಕ ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X