Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಭೂಮಾನಂದ ಸೇರಿ ಮೂರು...

Raichur | ಭೂಮಾನಂದ ಸೇರಿ ಮೂರು ಪ್ರಕರಣಗಳನ್ನು ಸಿಐಡಿ ತನಿಖೆಗೆ ಒಪ್ಪಿಸಲು ಗೃಹ ಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ22 Sept 2026 9:56 PM IST
share
Raichur | ಭೂಮಾನಂದ ಸೇರಿ ಮೂರು ಪ್ರಕರಣಗಳನ್ನು ಸಿಐಡಿ ತನಿಖೆಗೆ ಒಪ್ಪಿಸಲು ಗೃಹ ಸಚಿವರಿಗೆ ಮನವಿ

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಹಾಗೂ ಮಾಜಿ ಸಚಿವ ಎನ್.ಎಸ್. ಬೋಸರಾಜ್ ನೇತೃತ್ವದಲ್ಲಿ ಜಿಲ್ಲೆಯ ದಲಿತ ಮುಖಂಡರ ನಿಯೋಗವು ಮಂಗಳವಾರ ಬೆಂಗಳೂರಿನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ, ಜಿಲ್ಲೆಯ ಭೂಮಾನಂದ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಕರಣಗಳನ್ನು ಸಿಐಡಿ ತನಿಖೆಗೆ ಒಪ್ಪಿಸುವಂತೆ ಮನವಿ ಸಲ್ಲಿಸಿತು.

ನಿಯೋಗವು ಗೃಹ ಸಚಿವರಿಗೆ ಪ್ರಕರಣಗಳ ಕುರಿತು ವಿವರವಾದ ಮಾಹಿತಿ ನೀಡಿ, ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ಸ್ವತಂತ್ರ ಸಂಸ್ಥೆಗಳ ಮೂಲಕ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿತು.

ನಿಯೋಗದ ಸದಸ್ಯರು ಭೂಮಾನಂದ ಕೊಲೆ ಪ್ರಕರಣ ಹಾಗೂ ಅಶ್ವಿನಿ ಮತ್ತು ರಾಣೆಮ್ಮ ಪ್ರಕರಣಗಳ ತನಿಖೆಯನ್ನು ಗಂಭೀರವಾಗಿ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣಗಳ ಗಂಭೀರತೆ ತಮ್ಮ ಗಮನದಲ್ಲಿದ್ದು, ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸುವ ಪ್ರಶ್ನೆಯೇ ಇಲ್ಲ ಎಂದು ನಿಯೋಗಕ್ಕೆ ತಿಳಿಸಿರುವುದಾಗಿ ಮುಖಂಡರು ಹೇಳಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿಯೂ ಅವರು ತಿಳಿಸಿದ್ದಾರೆ ಎಂದು ನಿಯೋಗ ತಿಳಿಸಿದೆ.

ಇನ್ನೊಂದೆಡೆ, ಪ್ರಕರಣಗಳ ತನಿಖೆಯಲ್ಲಿ ವಿಳಂಬವಾದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ನಿಯೋಗದ ಸದಸ್ಯರು ತಿಳಿಸಿದರು.

ನಿಯೋಗದಲ್ಲಿ ಎಸ್. ಮಾರೆಪ್ಪ (ವಕೀಲ), ರವೀಂದ್ರನಾಥ್ ಪಟ್ಟಿ, ಅಂಬಣ್ಣ ಅರೋಲಿಕರ್, ಶಿವರಾಯ ಅಕ್ಕರಕಿ, ಹೇಮರಾಜ್ ಅಸ್ಕಿಹಾಳ್, ಶರಣಪ್ಪ ದಿನ್ನಿ, ಬೂದೆಪ್ಪ ಕ್ಯಾದಿಗಿ, ಬಸವರಾಜ್ ಮಿಯಾಪುರ, ಬಸವರಾಜ್ ಹದ್ದಿನಾಳ್, ಅರ್ಜುನ್ ಜಗಲಿ, ನರಸಿಂಹಲು ನೆಲಹಾಳ್, ನರಸಿಂಹಲು ಮರ್ಚಟಾಳ್, ಬಸವರಾಜ್ ಭಂಡಾರಿ, ವಸಂತ್ ಅಸ್ಕಿಹಾಳ್ ಹಾಗೂ ತಾಯಪ್ಪ ಗದಾರ್ ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X