Raichur | ಪೌರ ಕಾರ್ಮಿಕರಿಗೆ ಆರೋಗ್ಯ ಶಿಬಿರ

ರಾಯಚೂರು : ʼಪೌರ ಕಾರ್ಮಿಕರ ದಿನʼ ನಿಮಿತ್ತ ನಗರದ ಪೌರ ಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳಿಗೆ ಪಾಲಿಕೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು.
ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ತಪಾಸಣೆ, ರಕ್ತ ಪರೀಕ್ಷೆ, ಕಣ್ಣಿನ ತಪಾಸಣೆ ಸೇರಿ ವಿವಿಧ ತಪಾಸಣೆಗಳನ್ನು ಉಚಿತವಾಗಿ ನೆರವೇರಿಸಿ, ಅಗತ್ಯ ಇರುವವರಿಗೆ ಉಚಿತ ಔಷಧಿ ವಿತರಿಸಿ, ಮುಂದಿನ ಚಿಕಿತ್ಸೆಗೆ ಸಲಹೆ ನೀಡಲಾಯಿತು.
ಪಾಲಿಕೆ ಉಪ ಆಯುಕ್ತ ಮುರಳೀಧರ ಅವರು ಮಾತನಾಡಿ, ನಗರವನ್ನು ಶುಚಿಯಾಗಿಡಲು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ನಿಮ್ಮ ಆರೋಗ್ಯವನ್ನು ಕಾಪಾಡುವುದು ನಮ್ಮ ಜವಾಬ್ದಾರಿ. ನಿಮ್ಮ ನಿಸ್ವಾರ್ಥ ಸೇವೆಗೆ ಪ್ರತಿಯೊಬ್ಬರು ಚಿರಋಣಿಯಾಗಿರಬೇಕು ಎಂದರು.
ವಲಯ ಆಯುಕ್ತ ಮಲ್ಲಿಕಾರ್ಜುನ ಬಿ.ಎಂ ಅವರು ಮಾತನಾಡಿದರು.
ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಜೈಪಾಲ್ ರೆಡ್ಡಿ, ಸಮುದಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ, ತಾಲೂಕು ವೈದ್ಯಾಧಿಕಾರಿಗಳು, ವಾರ್ಡಿನ ಆರೋಗ್ಯ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.
Next Story




