Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಮಂತ್ರಾಲಯದಲ್ಲಿ...

ರಾಯಚೂರು | ಮಂತ್ರಾಲಯದಲ್ಲಿ ಶ್ರೀರಾಘವೇಂದ್ರಸ್ವಾಮಿಗಳ 354ನೇ ಮಧ್ಯಾರಾಧನೆ

ವಾರ್ತಾಭಾರತಿವಾರ್ತಾಭಾರತಿ11 Aug 2025 9:12 PM IST
share
ರಾಯಚೂರು | ಮಂತ್ರಾಲಯದಲ್ಲಿ ಶ್ರೀರಾಘವೇಂದ್ರಸ್ವಾಮಿಗಳ 354ನೇ ಮಧ್ಯಾರಾಧನೆ
ಮೂಲ ಬೃಂದಾವನಕ್ಕೆ ಮಹಾಪಂಚಾಮೃತಾಭಿಷೇಕ, ಸುವರ್ಣ ರಥೋತ್ಸವ

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಅಂಗವಾಗಿ ಮಹಾಪಂಚಾಮೃತಾಭಿಷೇಕ ಹಾಗೂ ಚಿನ್ನದ ರಥೋತ್ಸವ ಸೋಮವಾರ ಅದ್ಧೂರಿಯಾಗಿ ನಡೆಯಿತು.

ಶ್ರೀಗುರುಸಾರ್ವಭೌಮರ ಆರಾಧನಾ ಮಹೋತ್ಸವದ ಅಂಗವಾಗಿ ಮಧ್ಯಾರಾಧನೆ ಅಂಗವಾಗಿ ಬೆಳಿಗ್ಗೆ ಶ್ರೀರಾಯರ ಮೂಲಬೃಂದಾನದ ನಿರ್ಮಾಲ್ಯ ವಿಸರ್ಜನೆ, ಉತ್ಸವ ರಾಯರ ಪಾದಪೂಜೆ, ಪಂಚಾಮೃತಾಭಿಷೇಕವನ್ನು ನೆರವೇರಿಸಲಾಯಿತು.

ಶ್ರೀಮಠದಲ್ಲಿ ಆರಾಧನಾ ಮಹೋತ್ಸವದ ನಿಮಿತ್ತ ವಿದ್ವಾಂಸರಿಂದ ಪ್ರವಚನ ಕಾರ್ಯಕ್ರಮ ನಡೆದವು.

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನಕ್ಕೆ ಶ್ರೀಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮಹಾಪಂಚಾಮೃತಾಬಿಷೇಕವನ್ನು ನೆರವೇರಿಸಿದರು. ನಂತರ ಶ್ರೀರಾಘವೇಂದ್ರ ಸ್ವಾಮಿಗಳವರ ಮಠದ ಪ್ರಾಕಾರದಲ್ಲಿ ಚಿನ್ನದ ರಥದಲ್ಲಿ ಶ್ರೀರಾಯರ ಚಿನ್ನದ ಪಾದುಕೆ, ಪರಿಮಳ ಗ್ರಂಥ ಹಾಗೂ ಪ್ರಭಾವಳಿನ್ನಿಟ್ಟು ಆಯೋಜಿಸಿದ್ದ ರಥೋತ್ಸವಕ್ಕೆ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಚಾಲನೆ ನೀಡಿದರು. ಭಜನಾ ಮಂಡಳಿಗಳಿಂದ ಭಜನೆ, ವಿದ್ಯಾಪೀಠದ ವಿದ್ಯಾರ್ಥಿಗಳಿಂದ ವೇದಘೋಷ ಹಾಗೂ ವಾದ್ಯಮೇಳಗಳೊಂದಿಗೆ ಅದ್ಧೂರಿಯಾಗಿ ರಥೋತ್ಸವ ನಡೆಯಿತು.

ನಂತರ ಶ್ರೀಪಾದಂಗಳವರ ಶ್ರೀಮೂಲರಘುಪತಿ ವೇದವ್ಯಾಸದೇವರ ಪೂಜೆ, ಅಲಂಕಾರ ಹಾಗೂ ಹಸ್ತೋದಕ ಸಮರ್ಪಿಸಿದರು. ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.

ಶ್ರೀರಾಘವೇಂದ್ರ ಸ್ವಾಮಿಗಳವರ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಿಂದ ಭಾಗಗಳಿಂದ ಅಪಾರ ಸಂಖ್ಯೆ ಭಕ್ತರು ಆಗಮಿಸಿ, ಆರಾಧನಾ ಮಹೋತ್ಸವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತುಂಗಭದ್ರಾ ನದಿಗೆ ಇಳಿಯದಂತೆ ಮುಂಜಾಗ್ರತಾ ಕ್ರಮಗಳನ್ನು ಶ್ರೀಮಠವು ತೆಗೆದುಕೊಂಡಿತು. ಭಕ್ತರಿಗೆ ಸ್ನಾನ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿರುವ ಕಾರಣ ಎಲ್ಲ ಭಕ್ತರಿಗೂ ರಾಯರ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಶ್ರೀಮಠವು ಮಾಡಿತು.

ಶ್ರೀಗುರುರಾಯರ ಆರಾಧನೆಯಲ್ಲಿ ನಟ ಜಗ್ಗೇಶ ಭಾಗಿ :

ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳವರ 354ನೇ ಮಧ್ಯಾರಾಧನೆ ಅಂಗವಾಗಿ ಸೋಮವಾರ ಕನ್ನಡ ಚಲನಚಿತ್ರ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀರಾಯರ ದರ್ಶನ ಪಡೆದುಕೊಂಡರು. ನಟ ಜಗ್ಗೇಶ ಅವರನ್ನು ನೋಡಲು ಭಕ್ತರು ಮುಗಿಬಿದ್ದಿದ್ದು, ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿರುವುದು ಕಂಡುಬಂದಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X