ರಾಯಚೂರು| ಎಸೆಸೆಲ್ಸಿ ʼತೃತೀಯ ಭಾಷೆʼ ಪರೀಕ್ಷೆಗೆ 682 ವಿದ್ಯಾರ್ಥಿಗಳು ಗೈರು

ರಾಯಚೂರು: ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ತೃತೀಯ ಭಾಷೆ ವಿಷಯದ ಪರೀಕ್ಷೆಯಲ್ಲಿ ಒಟ್ಟು 29,785 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 682 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ 3,964 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು ತಾಲೂಕಿನಲ್ಲಿ 6,036 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 110 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಮಾನ್ವಿ ತಾಲೂಕಿನಲ್ಲಿ 5,360 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 165 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಯಚೂರು ತಾಲೂಕಿನಲ್ಲಿ 8,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 235 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿಂಧನೂರು ತಾಲೂಕಿನಲ್ಲಿ 5,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




