Raichur | ರಸ್ತೆ ಮಧ್ಯೆ ಅಡ್ಡಲಾಗಿ ಪಲ್ಟಿಯಾದ ಗಾಜು ತುಂಬಿದ್ದ ಲಾರಿ; ಇಬ್ಬರಿಗೆ ಗಾಯ

ರಾಯಚೂರು : ರಾಯಚೂರು ತಾಲೂಕಿನ ಕಲ್ಮಲಾ ಸಮೀಪ ಗಾಜು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇಂದು(ಡಿ.1) ಬೆಳಗ್ಗೆ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿದೆ.
ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ರಸ್ತೆಯ ಮಧ್ಯೆ ಅಡ್ಡಲಾಗಿ ಲಾರಿ ಪಲ್ಟಿಯಾಗಿದೆ.
ಸ್ಥಳಕ್ಕೆ ತೆರಳಿದ ರಾಯಚೂರು ಗ್ರಾಮೀಣ ಪೊಲೀಸರು ಕ್ರೇನ್ ಮೂಲಕ ಲಾರಿ ತೆರವುಗೊಳಿಸುತ್ತಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
Next Story





