ರಾಯಚೂರು | ಬಸ್-ಟ್ರಾಕ್ಟರ್ ನಡುವೆ ಅಪಘಾತ : ಬಸ್‍ನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ

ರಾಯಚೂರು: ತಾಲ್ಲೂಕಿನ ಕಲ್ಮಲಾ ಗ್ರಾಮದ ಸಮೀಪದ ಸೀತಾನಗರ ಕ್ಯಾಂಪ್‌ನಲ್ಲಿ ಟ್ರಾಕ್ಟರ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರ ಕಾಲು ಮುರಿದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೋಮವಾರ ನಡೆದಿದೆ.
ಗಾಯಗೊಂಡವರನ್ನು ನರಸಮ್ಮ, ಲಕ್ಷ್ಮೀ, ಹುಸೇನ್ ಹಾಗೂ ಕಲಂದರ್ ಎಂದು ಗುರುತಿಸಲಾಗಿದ್ದು, ಇವರಿಗೆ ಕಲ್ಮಲಾ ಗ್ರಾಮ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ರಾಯಚೂರಿನಿಂದ ಲಿಂಗಸುಗೂರು ಕಡೆಗೆ ತೆರಳುತ್ತಿದ್ದ ಬಸ್‌ಗೆ ಹತ್ತಿ ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Next Story





