Raichur | ಮನೆಗೆ ನುಗ್ಗಿ ಯುವಕನ ಕೊಲೆ: ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ (AI)
ಮಾನ್ವಿ: ಪಟ್ಟಣದ ಸಂಗಾಪುರ ರಸ್ತೆಯ ವಾರ್ಡ್ ನಂ 2ರಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಅವನ ಮನೆಯಲ್ಲಿಯೇ ಶುಕ್ರವಾರ ಹತ್ಯೆ ಮಾಡಲಾಗಿದೆ.
ಸ್ಥಳೀಯ ನಿವಾಸಿ ಹನುಮೇಶ (30) ಹತ್ಯೆಯಾದ ಯುವಕ.
ಕೊಲೆ ಆರೋಪಿ ಶಂಕರ (22) ಘಟನೆ ನಂತರ ನೇರವಾಗಿ ಪಟ್ಟಣದ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎನ್ನಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಿಐ ಸೋಮಶೇಖರ್ ಕೆಂಚರೆಡ್ಡಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Next Story




