ರಾಯಚೂರು | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ | PC : freepik.com
ರಾಯಚೂರು: ಜಿಲ್ಲೆಯ ಸಿಂಧನೂರು ನಗರದ ಖದ್ರೀಯಾ ಕಾಲೋನಿಯೊಂದರಲ್ಲಿ 7 ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊರ್ವನನ್ನು ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ವಿಶ್ವನಾಥ ಸಜ್ಜನ ಲೈಂಗಿಕ ಕಿರುಕುಳ ಎಸಗಿದ ಆರೋಪಿ ಎನ್ನಲಾಗಿದೆ.
ಸಂತ್ರಸ್ತೆಯ ಕುಟುಂಬವು ಬಾಡಿಗೆ ಮನೆಯಲ್ಲಿ ವಾಸವಾಗಿದೆ. ಜೂ.15ರ ರಾತ್ರಿ 8.45 ಗಂಟೆ ಸುಮಾರಿಗೆ ಆರೋಪಿ ವಿಶ್ವನಾಥ ಮನೆಯ ಟೇರಸ್ ಮೇಲೆ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಸಿಂಧನೂರು ನಗರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Next Story





