Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ...

ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಶೇ.31ರಷ್ಟು ಪೂರ್ಣ : ನಂಜಯ್ಯನಮಠ

ವಾರ್ತಾಭಾರತಿವಾರ್ತಾಭಾರತಿ13 Feb 2026 7:15 PM IST
share
ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಶೇ.31ರಷ್ಟು ಪೂರ್ಣ : ನಂಜಯ್ಯನಮಠ

ರಾಯಚೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರು ಫೆ.13ರಂದು ರಾಯಚೂರು ಜಿಲ್ಲೆಗೆ ಭೇಟಿ ನೀಡಿ, ಯರಮರಸ್ ಸಮೀಪದ ವಿಮಾನ ನಿಲ್ದಾಣ ಕಾಮಗಾರಿ ಸ್ಥಳವನ್ನು ಪರಿಶೀಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟಾರೆ 322 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ಶೇ.31ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ಎರಡೂವರೆ ತಿಂಗಳಲ್ಲಿ ರನ್‌ವೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಈ ವರ್ಷ ಮಳೆ ನಿರಂತರವಾಗಿ ಸುರಿದ ಪರಿಣಾಮ ರನ್‌ವೇ ಕಾಮಗಾರಿ ಸ್ವಲ್ಪ ಮಂದಗತಿಯಲ್ಲಿ ಸಾಗಿತ್ತು. ಆದರೂ ಒಟ್ಟಾರೆ ಮುಂದಿನ ಒಂದೂವರೆ ವರ್ಷದೊಳಗೆ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದರು. ಇನ್ನೂ ಮೂರು ತಿಂಗಳ ಬಳಿಕ ಮತ್ತೆ ರಾಯಚೂರಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸುವುದಾಗಿ ಹೇಳಿದರು.

ಏಗನೂರು ಗ್ರಾಮದಲ್ಲಿ 30 ಮನೆಗಳನ್ನು ಸ್ಥಳಾಂತರಿಸಲು ಮೂರು ಎಕರೆ ಜಮೀನು ಮೀಸಲಿಡಲಾಗಿದ್ದು, ದಂಡ ಗ್ರಾಮದಲ್ಲಿನ 108 ಮನೆಗಳನ್ನು ಸ್ಥಳಾಂತರಿಸಲು ಆರು ಎಕರೆ ಜಮೀನಿನಲ್ಲಿ ಲೇಔಟ್ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಿಸಿದಂತೆ ಸ್ಥಳಾಂತರವಾಗುವ ಎರಡು ಗ್ರಾಮಗಳ ನಿವಾಸಿಗಳಿಗೆ ಅವರ ಮನೆಗಳ ಮೌಲ್ಯಕ್ಕೆ ಅನುಗುಣವಾಗಿ ಪರಿಹಾರಧನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ರಾಜು ಬಂಡಿಕೇರಿ, ರಾಜು ಹರಿಳಯ್ಯಮಠ ಹಾಗೂ ಲೋಕೋಪಯೋಗಿ ಇಲಾಖೆಯ ಅಭಿಯಂತರ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Raichur AirportRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X