Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | 10 ಕೋಟಿ ರೂ. ಅವ್ಯವಹಾರ ಆರೋಪ...

Raichur | 10 ಕೋಟಿ ರೂ. ಅವ್ಯವಹಾರ ಆರೋಪ : ಸಿಂಧನೂರು ಜೆಇ ಅಮಾನತು

ವಾರ್ತಾಭಾರತಿವಾರ್ತಾಭಾರತಿ29 Sept 2026 7:12 PM IST
share
Raichur | 10 ಕೋಟಿ ರೂ. ಅವ್ಯವಹಾರ ಆರೋಪ : ಸಿಂಧನೂರು ಜೆಇ ಅಮಾನತು

ರಾಯಚೂರು: ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು 10 ಕೋಟಿ ರೂ. ಗೂ ಅಧಿಕ ಅವ್ಯವಹಾರ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಿಂಧನೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ಯಾಮಸುಂದರ ಕಾಳೇಕರ್ ಅವರು 15 ದಿನಗಳ ರಜೆಯಲ್ಲಿದ್ದ ಸಂದರ್ಭದಲ್ಲಿ ಅವರ ಸ್ಥಾನಕ್ಕೆ ಪ್ರಭಾರ ವಹಿಸಿಕೊಂಡಿದ್ದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರು 18ಕ್ಕೂ ಹೆಚ್ಚು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಲವು ಪತ್ರ ವ್ಯವಹಾರ ನಡೆಸಿ, ಸುಮಾರು 10 ಕೋಟಿ ರೂ. ಮೊತ್ತದ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಡೆಸಿದ ತನಿಖೆಯಲ್ಲಿ ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸೆ. 28ರಂದು ಅವರನ್ನು ಅಮಾನತುಗೊಳಿಸಲಾಗಿದೆ.

ಪ್ರಕರಣದ ಹಿನ್ನೆಲೆ :

ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ಯಾಮಸುಂದರ ಕಾಳೇಕರ್ ಅವರು 2024ರ ಜೂನ್ 20ರಿಂದ ಜುಲೈ 5ರವರೆಗೆ ರಜೆಯಲ್ಲಿದ್ದ ಸಂದರ್ಭದಲ್ಲಿ ನಾಗರಾಜ ಪ್ರಭಾ ಅವರಿಗೆ 15 ದಿನಗಳ ಪ್ರಭಾರ ನೀಡಲಾಗಿತ್ತು. ಈ ವೇಳೆ ನಾಗರಾಜ ಪ್ರಭಾ ಅವರ ವಿರುದ್ಧ ಈಗಾಗಲೇ ಕಚೇರಿ ಮಟ್ಟದಲ್ಲಿ ಹಲವು ದೂರುಗಳು ಹಾಗೂ ವಿಚಾರಣೆಗಳು ಬಾಕಿ ಇದ್ದವು. ಸರ್ಕಾರದ ಹಂತದಲ್ಲಿಯೂ ಗಂಭೀರ ಸ್ವರೂಪದ ವಿಚಾರಣೆ ಬಾಕಿ ಇರುವಾಗಲೇ ಅವರಿಗೆ ಪ್ರಭಾರ ಜವಾಬ್ದಾರಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಶ್ಯಾಮಸುಂದರ ಕಾಳೇಕರ್ ರಜೆಯಲ್ಲಿದ್ದ ಸಂದರ್ಭದಲ್ಲಿ ನಾಗರಾಜ ಪ್ರಭಾ ಅವರು ಸಿಇಒ ಅವರ ಲಿಖಿತ ಆದೇಶವಿಲ್ಲದೆ ಖೊಟ್ಟಿ ಸಿಟಿಸಿ ಸೃಷ್ಟಿಸಿ ಪ್ರಭಾರ ವಹಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ನಿಯಮಗಳ ಪ್ರಕಾರ ಶಿಸ್ತು ಕ್ರಮ ಅಥವಾ ವಿಚಾರಣೆ ಬಾಕಿ ಇರುವ ಅಧಿಕಾರಿಯನ್ನು ಹಣಕಾಸು ಹೊಣೆಗಾರಿಕೆ ಹೊಂದಿರುವ ಹುದ್ದೆಯಿಂದ ದೂರ ಇರಿಸಬೇಕಾಗುತ್ತದೆ. ಆದರೆ ನಾಗರಾಜ ಪ್ರಭಾ ಅವರ ವಿಚಾರದಲ್ಲಿ ಈ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಹಾಯಕ ಕಾರ್ಯಪಾಲಕ ಅಭಿಯಂತರ ಲಭ್ಯವಿದ್ದ ಸಂದರ್ಭದಲ್ಲಿ ಕಿರಿಯ ಅಭಿಯಂತರರಿಗೆ ಪ್ರಭಾರ ನೀಡಲು ಅವಕಾಶವಿಲ್ಲದಿದ್ದರೂ ನಾಗರಾಜ ಪ್ರಭಾ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದೇ ಅವಕಾಶವನ್ನು ಬಳಸಿಕೊಂಡು 15 ದಿನಗಳ ಅವಧಿಯಲ್ಲಿ ಸುಮಾರು 10 ಕೋಟಿ ರೂ. ಮೊತ್ತದ ಬಿಲ್‌ಗಳಿಗೆ ಸಹಿ ಮಾಡಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪೂರ್ಣ ಪ್ರಮಾಣದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ಯಾಮಸುಂದರ ಕಾಳೇಕರ್ ಅವರು ಎಸ್‌ಬಿಆರ್‌ನಲ್ಲಿ ಅಂಡರ್‌ಲೈನ್ ಮಾಡಿ ಸಹಿ ಮಾಡಿದ ನಂತರವೂ ನಾಗರಾಜ ಪ್ರಭಾ ಅವರು ಮತ್ತೆ ಸಹಾಯಕ ಕಾರ್ಯಪಾಲಕ ಅಭಿಯಂತರರ ಹೆಸರಿನಲ್ಲಿ ಸಹಿ ಮಾಡಿ ಹಣಕಾಸು ಅಧಿಕಾರ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕ್ರಿಮಿನಲ್ ಹಾಗೂ ಆರ್ಥಿಕ ಅವ್ಯವಹಾರದ ಆರೋಪಗಳ ಹಿನ್ನೆಲೆಯಲ್ಲಿ ನಾಗರಾಜ ಪ್ರಭಾ ಅವರನ್ನು ಅಮಾನತುಗೊಳಿಸಿರುವುದು ಕ್ರಮಬದ್ಧವಾಗಿದ್ದರೂ, ಈವರೆಗೆ ಕ್ರಿಮಿನಲ್ ಪ್ರಕರಣ ದಾಖಲಿಸದೆ ಕೇವಲ ಇಲಾಖಾ ವಿಚಾರಣೆಗೆ ಸೀಮಿತಗೊಳಿಸಿರುವುದು ಚರ್ಚೆ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

Tags

SindhanurRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X