Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | 1 ಲಕ್ಷದೊಳಗಿನ ಬಿಲ್‌...

Raichur | 1 ಲಕ್ಷದೊಳಗಿನ ಬಿಲ್‌ ಪಾವತಿಯಲ್ಲಿ ಮೀಸಲಾತಿ ನಿಯಮ ಉಲ್ಲಂಘನೆ ಆರೋಪ: ಮರುಪರಿಶೀಲನೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Aug 2026 2:18 PM IST
share
Raichur | 1 ಲಕ್ಷದೊಳಗಿನ ಬಿಲ್‌ ಪಾವತಿಯಲ್ಲಿ ಮೀಸಲಾತಿ ನಿಯಮ ಉಲ್ಲಂಘನೆ ಆರೋಪ: ಮರುಪರಿಶೀಲನೆಗೆ ಆಗ್ರಹ

ರಾಯಚೂರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ (RDWSD), ರಾಯಚೂರು ಹಾಗೂ ಅದರ ಅಧೀನ ಕಚೇರಿಗಳಲ್ಲಿ 1 ಲಕ್ಷ ರೂ. ಒಳಗಿನ ಖರೀದಿ, ಕಾಮಗಾರಿ ಮತ್ತು ಸೇವೆಗಳಿಗೆ ಸಂಬಂಧಿಸಿದ ಬಿಲ್‌ ಪಾವತಿಯಲ್ಲಿ ಮೀಸಲಾತಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ಮರುಪರಿಶೀಲನೆ ನಡೆಸಬೇಕು ಎಂದು ದಲಿತ ಸೇನೆ ರಾಷ್ಟ್ರೀಯ ಸಂಘಟನೆಯ ರಾಯಚೂರು ಜಿಲ್ಲಾ ಅಧ್ಯಕ್ಷ ಮಾರುತಿ ಕಮ್ತೋಳ್ ಆಗ್ರಹಿಸಿದ್ದಾರೆ.

ಈ ಕುರಿತು ಆ.11ರಂದು ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕರಿಗೆ ಮರುಪರಿಶೀಲನಾ ಮನವಿ ಸಲ್ಲಿಸಿರುವ ಅವರು, ಈ ಹಿಂದೆ ಮಾ.12ರಂದು ಸಲ್ಲಿಸಿದ್ದ ದೂರಿಗೆ ಖಜಾನೆ ಇಲಾಖೆ ಆ.5ರಂದು ನೀಡಿರುವ ಉತ್ತರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಮಾರುತಿ ಕಮ್ತೋಳ್ ಅವರ ಆರೋಪದಂತೆ, 2006ರ ಡಿ.29ರಂದು ಸಮಾಜ ಕಲ್ಯಾಣ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ವಯ 1 ಲಕ್ಷ ರೂ. ಒಳಗಿನ ಕೆಲವು ಸರ್ಕಾರಿ ಖರೀದಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ನಿಗದಿಪಡಿಸಿರುವ ಆದ್ಯತೆ ಹಾಗೂ ಮೀಸಲಾತಿ ನಿಯಮಗಳನ್ನು ಪಾಲಿಸಬೇಕಿದೆ. ಆದರೆ RDWSD ರಾಯಚೂರು ವಿಭಾಗ ಹಾಗೂ ಅಧೀನ ಕಚೇರಿಗಳಲ್ಲಿ ಈ ನಿಯಮಗಳನ್ನು ಪಾಲಿಸದೆ ಬಿಲ್‌ ಪಾವತಿಸಲಾಗಿದೆ ಎಂದು ಅವರು ದೂರಿದ್ದಾರೆ.

ತಮ್ಮ ದೂರಿಗೆ ಖಜಾನೆ ಇಲಾಖೆಯಿಂದ ಮೀಸಲಾತಿ ನಿಯಮ ಪಾಲನೆಯಾಗಿದೆಯೇ ಎಂಬುದನ್ನು ಪರಿಶೀಲಿಸುವ ಅಧಿಕಾರ ಖಜಾನೆಗೆ ಇಲ್ಲ ಹಾಗೂ ಬಿಲ್‌ ತಡೆಹಿಡಿಯುವ ಅಧಿಕಾರವೂ ಇಲ್ಲ ಎಂಬ ಉತ್ತರ ಬಂದಿದೆ ಎಂದು ಮಾರುತಿ ತಿಳಿಸಿದ್ದಾರೆ. ಈ ನಿಲುವು KTC, KFC ಹಾಗೂ MCE ನಿಯಮಗಳ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

RDWSD ಇಲಾಖೆಯಿಂದ ಇದುವರೆಗೆ 1 ಲಕ್ಷ ರೂ. ಒಳಗೆ ಪಾವತಿಸಲಾದ ಎಲ್ಲ ಬಿಲ್‌ಗಳ ವೌಚರ್ ಸಂಖ್ಯೆ, ದಿನಾಂಕ, ಮೊತ್ತ ಹಾಗೂ ಸಂಬಂಧಿತ ಫಲಾನುಭವಿಗಳ ವಿವರಗಳನ್ನು ಪಡೆದು ಪರಿಶೀಲಿಸಬೇಕು. ಮೀಸಲಾತಿ ನಿಯಮ ಉಲ್ಲಂಘಿಸಿರುವುದು ಕಂಡುಬಂದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮವಾಗಿ ಪಾವತಿಯಾಗಿರುವ ಮೊತ್ತವಿದ್ದರೆ ಅದನ್ನು ವಸೂಲಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

15 ದಿನಗಳೊಳಗೆ ಕೈಗೊಂಡ ಕ್ರಮದ ವರದಿ ನೀಡದಿದ್ದರೆ ಕರ್ನಾಟಕ ಮಾಹಿತಿ ಆಯೋಗ ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸುವುದಾಗಿ ಮಾರುತಿ ಕಮ್ತೋಳ್ ಎಚ್ಚರಿಸಿದ್ದಾರೆ. ಮನವಿಯ ಪ್ರತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಖಜಾನೆ ಇಲಾಖೆಯ ನಿರ್ದೇಶಕರು ಹಾಗೂ ಲೋಕಾಯುಕ್ತರಿಗೂ ಸಲ್ಲಿಸಿದ್ದಾರೆ.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X