Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಯೋಜನಾ ವಿಭಾಗದ ಇಇಗೆ ಕುಡಿಯುವ...

Raichur | ಯೋಜನಾ ವಿಭಾಗದ ಇಇಗೆ ಕುಡಿಯುವ ನೀರು ವಿಭಾಗದ ಹೆಚ್ಚುವರಿ ಹೊಣೆ ಆರೋಪ : ಸಿಇಒ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ4 Oct 2026 3:41 PM IST
share
Raichur | ಯೋಜನಾ ವಿಭಾಗದ ಇಇಗೆ ಕುಡಿಯುವ ನೀರು ವಿಭಾಗದ ಹೆಚ್ಚುವರಿ ಹೊಣೆ ಆರೋಪ : ಸಿಇಒ ವಿರುದ್ಧ ದೂರು

ರಾಯಚೂರು: ರಾಯಚೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರ ಹೆಚ್ಚುವರಿ ಪ್ರಭಾರವನ್ನು ಯೋಜನಾ ವಿಭಾಗದ (ಪಿಎಂಜಿಎಸ್‌ಐ) ಕಾರ್ಯಪಾಲಕ ಅಭಿಯಂತರರಿಗೆ ನಿಯಮಬಾಹಿರವಾಗಿ ಜಿಲ್ಲಾ ಪಂಚಾಯತ್‌ ಸಿಇಒ ಅವರು ವಹಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಮೇನಕಾ ಪಾಟೀಲ ಅವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ಸೆ.18ರಂದು ವಹಿಸಿಕೊಂಡು ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ, ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (ಕೆಆರ್‌ಆರ್‌ಡಿಎ) ಅಧೀನದ ಯೋಜನಾ ವಿಭಾಗದ ಕಲ್ಯಾಣ ಕರ್ನಾಟಕ ಪಥ, ಕೆಕೆಆರ್‌ಡಿಬಿ, ಎಸ್‌ಡಿಪಿ ಸೇರಿದಂತೆ ವಿವಿಧ ಕಾಮಗಾರಿಗಳ ಭೌತಿಕ ಹಾಗೂ ಆರ್ಥಿಕ ಪ್ರಗತಿ ಮತ್ತು ಆಡಳಿತಾತ್ಮಕ ಕಾರ್ಯಗಳಿಗೆ ಇದರಿಂದ ನೇರ ಅಡಚಣೆಯಾಗಲಿದೆ ಎಂದು ದಲಿತ ಸೇನೆಯ ಜಿಲ್ಲಾಧ್ಯಕ್ಷ ಮಾರುತಿ ಕಮ್ತೋಳ್ ಬೆಂಗಳೂರಿನ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕೆಕೆಆರ್‌ಡಿಎ ಯೋಜನಾ ವಿಭಾಗವು ರಾಜ್ಯ ಮಟ್ಟದ ಸೊಸೈಟಿಯಾಗಿದ್ದು, ಇದರ ಆಡಳಿತಾತ್ಮಕ ನಿಯಂತ್ರಣ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುತ್ತದೆ. ಆದರೆ ರಾಯಚೂರು ಜಿ.ಪಂ. ಸಿಇಒ ಅವರು ಯೋಜನಾ ವಿಭಾಗದಲ್ಲಿ ಹಸ್ತಕ್ಷೇಪ ಹಾಗೂ ನಿಯಂತ್ರಣ ಸಾಧಿಸಲು ಮುಂದಾಗಿರುವುದು ನಿಯಮಬಾಹಿರವಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಕೆಕೆಆರ್‌ಡಿಎ ಯೋಜನಾ ವಿಭಾಗದ ಅಧಿಕಾರಿಗಳಿಗೆ ಇಲಾಖೆಯೇತರ ಹೆಚ್ಚುವರಿ ಪ್ರಭಾರ ನೀಡುವುದು ಕೆಸಿಎಸ್‌ಆರ್ ಹಾಗೂ ಕೆಆರ್‌ಆರ್‌ಡಿಎ ನಿಯಮಗಳ ಪ್ರಕಾರ ಸರಿಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಒಂದು ವೇಳೆ ಪೂರ್ವಾನುಮತಿ ಇಲ್ಲದೆ ಜಿ.ಪಂ. ಸಿಇಒ ಅವರು ಇಲಾಖೆಯೇತರ ವಿಭಾಗದ ಪ್ರಭಾರ ವಹಿಸುವಂತೆ ಆದೇಶ ನೀಡಿದ್ದರೆ, ಅಂತಹ ಆದೇಶ ಪಾಲಿಸದಂತೆ ಯೋಜನಾ ವಿಭಾಗದ ಎಲ್ಲ ಕಾರ್ಯಪಾಲಕ ಅಭಿಯಂತರರಿಗೆ ಸ್ಪಷ್ಟ ಸುತ್ತೋಲೆ ಹೊರಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Tags

drinking waterRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X