Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ತಿಡಿಗೋಳದಲ್ಲಿ ದಲಿತರ ಮೇಲಿನ...

Raichur | ತಿಡಿಗೋಳದಲ್ಲಿ ದಲಿತರ ಮೇಲಿನ ದೌರ್ಜನ್ಯ ಆರೋಪ : ನ.8ರಂದು ‘ತಿಡಿಗೋಳ ಚಲೋ’ ಹೋರಾಟ

ಅ.30ರಂದು ಸಿಂಧನೂರಿಗೆ ಆಗಮಿಸುವ ಸಿಎಂಗೆ ಕಪ್ಪುಪಟ್ಟಿ ಪ್ರದರ್ಶನ: ಎಸ್. ಮಾರೆಪ್ಪ

ವಾರ್ತಾಭಾರತಿವಾರ್ತಾಭಾರತಿ27 Oct 2026 5:45 PM IST
share
Raichur | ತಿಡಿಗೋಳದಲ್ಲಿ ದಲಿತರ ಮೇಲಿನ ದೌರ್ಜನ್ಯ ಆರೋಪ : ನ.8ರಂದು ‘ತಿಡಿಗೋಳ ಚಲೋ’ ಹೋರಾಟ

ರಾಯಚೂರು: ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ, ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರ ಹಾಗೂ ಭೂಮಿ ಮತ್ತು ನಿವೇಶನಗಳ ಅತಿಕ್ರಮಣ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬಗಳಿಗೆ ರಕ್ಷಣೆ ಒದಗಿಸಬೇಕು. ದಲಿತ ಯುವಕರ ವಿರುದ್ಧ ದಾಖಲಿಸಿರುವ 21 ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ.8ರಂದು ಸಿಂಧನೂರಿನಿಂದ ತಿಡಿಗೋಳದವರೆಗೆ ಬೃಹತ್ ‘ತಿಡಿಗೋಳ ಚಲೋ’ ಹೋರಾಟ ನಡೆಸಿ, ಬಹಿರಂಗ ಸಭೆ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್. ಮಾರೆಪ್ಪ, ಅ.30ರಂದು ಸಿಂಧನೂರಿಗೆ ಆಗಮಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪುಪಟ್ಟಿ ಧರಿಸಿ, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಜಾತಿ ಪದ್ಧತಿ ನಿರಂತರವಾಗಿ ಜೀವಂತವಾಗಿದ್ದು, ದಲಿತರ ಮೇಲಿನ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಕುರಿತು ಮಾತನಾಡುತ್ತಿದ್ದರೂ, ದಲಿತರ ಕೊಲೆ, ಅತ್ಯಾಚಾರ ಹಾಗೂ ಸಾಮಾಜಿಕ ಬಹಿಷ್ಕಾರದ ಪ್ರಕರಣಗಳ ಕುರಿತು ಸಮರ್ಪಕವಾಗಿ ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ನವೆಂಬರ್ 8ರಂದು ಸಿಂಧನೂರಿನಿಂದ ತಿಡಿಗೋಳದವರೆಗೆ ‘ತಿಡಿಗೋಳ ಚಲೋ’ ಚಳವಳಿ ನಡೆಸಿ, ಬಹಿರಂಗ ಸಭೆ ಆಯೋಜಿಸಲಾಗುವುದು. ಸರ್ಕಾರ ಹಾಗೂ ಜಿಲ್ಲಾಡಳಿತ ಬೇಡಿಕೆಗಳಿಗೆ ಸ್ಪಂದಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ತಿಡಿಗೋಳದಲ್ಲಿ ದಲಿತರ ಮೇಲೆ ಹಲ್ಲೆ ಆರೋಪ :

ದಲಿತ ಮುಖಂಡ ಹಾಗೂ ಉಪನ್ಯಾಸಕ ತಾಯಪ್ಪ ತಿಡಿಗೋಳ್ ಮಾತನಾಡಿ, ಅಕ್ಟೋಬರ್ 18ರಂದು ತಿಡಿಗೋಳ ಗ್ರಾಮದ ಮಾರುತೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ದಲಿತ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಅವರನ್ನು ರಕ್ಷಿಸಲು ಮುಂದಾದ ಮಹಿಳೆಯರು, ವೃದ್ಧರು ಹಾಗೂ ಇತರರ ಮೇಲೆಯೂ ಹಲ್ಲೆ ನಡೆದಿದೆ ಎಂದು ಆರೋಪಿಸಿದರು.

ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಕೆಲವು ಕುಟುಂಬಗಳು ಗ್ರಾಮ ತೊರೆಯುವ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದರು. ಸಂತ್ರಸ್ತ ಕುಟುಂಬಗಳಿಗೆ ಪೊಲೀಸ್ ರಕ್ಷಣೆ ಒದಗಿಸಿ, ಅವರು ಸುರಕ್ಷಿತವಾಗಿ ಗ್ರಾಮಕ್ಕೆ ಮರಳಲು ಕ್ರಮ ಕೈಗೊಳ್ಳಬೇಕು. ದಲಿತ ಯುವಕರ ವಿರುದ್ಧ ದಾಖಲಿಸಿರುವ 21 ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ನಿರಾಕರಿಸಲಾಗುತ್ತಿದೆ ಎಂದೂ ಆರೋಪಿಸಿದರು. 17 ಕುಟುಂಬಗಳ ನಿವೇಶನಗಳ ಅತಿಕ್ರಮಣ, ಸರ್ಕಾರಿ ಭೂಮಿ ಒತ್ತುವರಿ, ಆಶ್ರಯ ನಿವೇಶನಗಳ ಕೊರತೆ ಹಾಗೂ ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಾವದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು.

ಕುಡಿಯುವ ನೀರು, ಚರಂಡಿ, ರಸ್ತೆ, ಬೀದಿದೀಪ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಪಡೆಯುವಲ್ಲಿಯೂ ಸಮಸ್ಯೆಗಳಿವೆ ಎಂದು ತಿಳಿಸಿದರು. ದಲಿತ ಯುವಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು, ಸಂತ್ರಸ್ತರಿಗೆ ಆಹಾರ ಧಾನ್ಯ ಮತ್ತು ಪೊಲೀಸ್ ರಕ್ಷಣೆ ಒದಗಿಸುವುದು, ಅಸ್ಪೃಶ್ಯತೆ ನಿವಾರಣೆ, ಸರ್ಕಾರಿ ಭೂಮಿ ಅತಿಕ್ರಮಣದ ತನಿಖೆ ಹಾಗೂ ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು. ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವೀಂದ್ರನಾಥ್ ಪಟ್ಟಿ, ನಮ್ಮ ಜಿಲ್ಲೆಯವರೇ ಆದ ಗೃಹ ಸಚಿವರು ಜಿಲ್ಲೆಯಲ್ಲಿ ದಲಿತರ ಕೊಲೆ, ಅತ್ಯಾಚಾರ ಹಾಗೂ ಇತರ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರೂ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜಿಲ್ಲೆಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸಾಮಾಜಿಕ ಬಹಿಷ್ಕಾರದ ಪ್ರಕರಣಗಳು ನಡೆಯುತ್ತಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗೃಹ ಸಚಿವರ ಭಾವಚಿತ್ರ ದಹಿಸಿ, ಪಿಂಡ ಪ್ರದಾನ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಕೊಲೆ, ಅತ್ಯಾಚಾರ ಹಾಗೂ ಸಾಮಾಜಿಕ ಬಹಿಷ್ಕಾರದ ಪ್ರಕರಣಗಳ ತನಿಖೆ ನಡೆಸುವಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಪ್ರಕರಣಗಳ ತನಿಖೆ ಹಾಗೂ ದಲಿತರ ರಕ್ಷಣೆಯ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕು, ಸಂತ್ರಸ್ತ ಕುಟುಂಬಗಳಿಗೆ ರಕ್ಷಣೆ ನೀಡಬೇಕು, ಸಾಮಾಜಿಕ ಬಹಿಷ್ಕಾರ ತಡೆಯಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ಆರ್. ಭೇರಿ, ಹೇಮರಾಜ್ ಆಸ್ಕಿಹಾಳ್, ಶರಣಪ್ಪ ದಿನ್ನಿ, ರಾಜು ಬೊಮ್ಮನಹಾಳ, ನರಸಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

protestRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X