Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಪ್ರಿಯಾಂಕ್ ಖರ್ಗೆ ವಿರುದ್ಧ...

Raichur | ಪ್ರಿಯಾಂಕ್ ಖರ್ಗೆ ವಿರುದ್ಧ ಹೇಳಿಕೆ ಆರೋಪ: ಕುಮಾರಸ್ವಾಮಿ ವಿರುದ್ಧ ಘೇರಾವ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 Oct 2026 12:27 PM IST
share
Raichur | ಪ್ರಿಯಾಂಕ್ ಖರ್ಗೆ ವಿರುದ್ಧ ಹೇಳಿಕೆ ಆರೋಪ: ಕುಮಾರಸ್ವಾಮಿ ವಿರುದ್ಧ ಘೇರಾವ್ ಎಚ್ಚರಿಕೆ

ರಾಯಚೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿರುವ ಕೆಪಿಸಿಸಿಯ ರಾಜ್ಯ ಸಂಚಾಲಕ ಹಾಗೂ ಪರಿಶಿಷ್ಟ ಜಾತಿಗಳ ವಿಭಾಗದ ರಾಜ್ಯ ಮಾಧ್ಯಮ ವಕ್ತಾರ ಮಾಳೇಶ ಬೊಮ್ಮನಾಳ, ಇನ್ನು ಮುಂದೆ ಇದೇ ರೀತಿ ಹೇಳಿಕೆ ನೀಡಿದರೆ ಘೇರಾವ್ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರನ್ನು ದಲಿತ-ಬಲಿತ ನಾಯಕ ಎಂದು ಉಲ್ಲೇಖಿಸಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿದರು. “ನಿಮ್ಮಪ್ಪ ಕೊಟ್ಟಿದ್ದಲ್ಲ ಅಧಿಕಾರ” ಎಂದು ಹೇಳುವ ಮೂಲಕ ತುಚ್ಛವಾಗಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಅವರು ಎರಡು ಬಾರಿ ಮತದಾರರ ಆಶೀರ್ವಾದದಿಂದ ಹಾಗೂ ಕಾಂಗ್ರೆಸ್ ಮತ್ತು ಬಿಜೆಪಿಯ ಬೆಂಬಲದಿಂದ ಅಧಿಕಾರಕ್ಕೆ ಬಂದಿದ್ದಾರೆಯೇ ಹೊರತು ಸ್ವಂತ ಬಲದಿಂದಲ್ಲ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಧಿಕಾರ ನಿರ್ಧಾರವಾಗುವುದು ಮತದಾನದ ಮೂಲಕ ಎಂಬುದನ್ನು ಕುಮಾರಸ್ವಾಮಿ ಅರ್ಥಮಾಡಿಕೊಳ್ಳಬೇಕು. ಹಿಂದೆ ರಾಣಿಯರ ಹೊಟ್ಟೆಯಲ್ಲಿ ರಾಜರು ಹುಟ್ಟುತ್ತಿದ್ದರು. ಆದರೆ, ಡಾ. ಬಿ.ಆರ್. ಅಂಬೇಡ್ಕರ್ ಅವರು ಮತದಾನದ ಪೆಟ್ಟಿಗೆಯ ಮೂಲಕ ರಾಜರನ್ನು ಸೃಷ್ಟಿಸುವ ವ್ಯವಸ್ಥೆಯನ್ನು ರೂಪಿಸಿದ್ದಾರೆ. ಕುಮಾರಸ್ವಾಮಿ ಅವರ ತಂದೆ ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದೂ ಸಂವಿಧಾನ ನೀಡಿದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕವೇ ಎಂಬುದನ್ನು ಅರಿತುಕೊಳ್ಳಬೇಕು. ಪ್ರಧಾನಿಯ ಮಗನಾಗಿ ಸಾರ್ವಜನಿಕವಾಗಿ ಹಗುರವಾಗಿ ಮಾತನಾಡುವುದು ದೇವೇಗೌಡರಿಗೂ ಶೋಭೆ ತರುವುದಿಲ್ಲ ಎಂದು ಎಚ್ಚರಿಸಿದರು.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದನ್ನು ಹಾಗೂ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗಿರುವುದನ್ನು ಸಹಿಸದೆ ಕುಮಾರಸ್ವಾಮಿ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಾಳೇಶ ಬೊಮ್ಮನಾಳ, ಈ ಹಿಂದೆ ಮಾಜಿ ಸಚಿವ ಹಾಗೂ ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಅವರು ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಅವರು ಎಲ್ಲಿದ್ದರು ಎಂದು ಪ್ರಶ್ನಿಸಿದರು.

ಕಳಂಕರಹಿತ ಹಾಗೂ ಭ್ರಷ್ಟಾಚಾರರಹಿತ ಆಡಳಿತವನ್ನು ಹೇಗೆ ನಡೆಸಬೇಕು ಎಂಬುದನ್ನು ಪ್ರಿಯಾಂಕ್ ಖರ್ಗೆ ಅವರನ್ನು ನೋಡಿ ಕಲಿಯಬೇಕು ಎಂದು ಕುಮಾರಸ್ವಾಮಿ ಅವರ ಸಹೋದರ ಎಚ್.ಡಿ. ರೇವಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಬಹಿರಂಗವಾಗಿ ಪ್ರಸ್ತಾಪಿಸಿರುವುದು ಪ್ರಿಯಾಂಕ್ ಖರ್ಗೆ ಅವರ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಇಂತಹ ರಾಜಕಾರಣಿಯನ್ನು ಕುಮಾರಸ್ವಾಮಿ ಟೀಕಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು.

ಇನ್ನು ಮುಂದೆ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರ ವಿರುದ್ಧ ದೇಶದಾದ್ಯಂತ ಘೇರಾವ್ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಳೇಶ ಬೊಮ್ಮನಾಳ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಗಿರಿಯಪ್ಪ ನೆಲಹಾಳ, ಶರಣಪ್ಪ ನಾಯಕ ಹಿರೆರಾಯಕುಂಪಿ, ಉಸ್ಮಾನ್ ಸಾಬ್ ಖಾನಪೂರು, ಬಸಲಿಂಗಪ್ಪ ನಾಯಕ ಖಾನಪೂರು, ವಿಜಯ ಪ್ರಸಾದ್, ಮೂಕಪ್ಪ ಹಾಗೂ ಬಸಲಿಂಗಪ್ಪ ಭಗೀರಥ ಉಪಸ್ಥಿತರಿದ್ದರು.

Tags

KumaraswamyPriyank KhargeRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X