Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಐಸಿಡಿಎಸ್ ಅನುದಾನ...

Raichur | ಐಸಿಡಿಎಸ್ ಅನುದಾನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ, ಬಿಸಿಯೂಟ ನೌಕರರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 July 2026 7:53 PM IST
share
Raichur | ಐಸಿಡಿಎಸ್ ಅನುದಾನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ, ಬಿಸಿಯೂಟ ನೌಕರರ ಪ್ರತಿಭಟನೆ
ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಒತ್ತಾಯ

ರಾಯಚೂರು : ಐಸಿಡಿಎಸ್ ಯೋಜನೆಗೆ ಕೇಂದ್ರ ಸರ್ಕಾರ ಸಮರ್ಪಕ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿ, ಅಂಗನವಾಡಿ ನೌಕರರ ಸಂಘ ಹಾಗೂ ಬಿಸಿಯೂಟ ನೌಕರರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಕರಾಳ ದಿನ ಆಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಐಸಿಡಿಎಸ್ ಯೋಜನೆಗೆ ಬೆಲೆ ಏರಿಕೆಗೆ ಅನುಗುಣವಾಗಿ ಅನುದಾನ ಹೆಚ್ಚಿಸದ ಪರಿಣಾಮ ಯೋಜನೆಗೆ ತೀವ್ರ ಹೊಡೆತ ಬಿದ್ದಿದೆ. ಬಿಸಿಯೂಟ ಯೋಜನೆಗೆ ಅಗತ್ಯ ಅನುದಾನ ನೀಡದೇ ಖಾಸಗಿ ಸಂಸ್ಥೆಗಳಿಗೆ ವಹಿಸಲು ಸರ್ಕಾರ ಮುಂದಾಗಿರುವುದು ಯೋಜನೆಯನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

2017ರಿಂದ ಪೌಷ್ಠಿಕ ಆಹಾರದ ಘಟಕ ವೆಚ್ಚವನ್ನು ಹೆಚ್ಚಿಸದ ಕಾರಣ ಅಂಗನವಾಡಿ ವ್ಯವಸ್ಥೆ ದುರ್ಬಲಗೊಳ್ಳುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ 3ರಿಂದ 6 ವರ್ಷದ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭವಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ದೂರಿದರು.

ಬಿಸಿಯೂಟ ಯೋಜನೆ ಆರಂಭವಾಗಿ 25 ವರ್ಷಗಳಾದರೂ ನೌಕರರ ಗೌರವಧನದಲ್ಲಿ ಸಮರ್ಪಕ ಹೆಚ್ಚಳವಾಗಿಲ್ಲ. ಉದ್ಯೋಗ ಭದ್ರತೆಯಿಲ್ಲದೆ ಬಡ ಮಹಿಳೆಯರ ಶೋಷಣೆ ನಡೆಯುತ್ತಿದ್ದು, ಯೋಜನೆಯನ್ನು ಇಸ್ಕಾನ್‌ಗೆ ವಹಿಸುವ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕು ಎಂದು ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್. ಪದ್ಮಾ ಒತ್ತಾಯಿಸಿದರು.

ಅಂಗನವಾಡಿ ನೌಕರರಿಗೆ ಎಫ್‌ಆರ್‌ಎಸ್, ಇ-ಕೆವೈಸಿ, ಪೋಷಣ್ ಟ್ರ್ಯಾಕರ್ ಸೇರಿದಂತೆ ವಿವಿಧ ಆನ್‌ಲೈನ್ ಕೆಲಸಗಳನ್ನು ಗುಣಮಟ್ಟದ ಮೊಬೈಲ್, 5ಜಿ ಡೇಟಾ ಹಾಗೂ ವೈ-ಫೈ ಸೌಲಭ್ಯ ಒದಗಿಸದೆ ನಿರ್ವಹಿಸಲು ಒತ್ತಾಯಿಸಲಾಗುತ್ತಿದೆ. ಸರ್ಕಾರದ ಈ ನೌಕರ ವಿರೋಧಿ ನೀತಿಯನ್ನು ತಕ್ಷಣ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯ ಸರ್ಕಾರ ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15,000 ರೂ. ಹಾಗೂ ಸಹಾಯಕಿಯರಿಗೆ 10,000 ರೂ. ಗೌರವಧನ ಜಾರಿಗೊಳಿಸಬೇಕು. ಬಿಸಿಯೂಟ ನೌಕರರ ಗೌರವಧನವನ್ನು 7,000 ರೂ. ಹೆಚ್ಚಳ ಮಾಡಬೇಕು. ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಎಲ್‌ಕೆಜಿ–ಯುಕೆಜಿ ವಿಸ್ತರಿಸಬೇಕು. ಸಾದಿಲ್ವಾರು ಜಂಟಿ ಖಾತೆಯ ಜವಾಬ್ದಾರಿಯನ್ನು ಎಸ್‌ಡಿಎಂಸಿಗೆ ವರ್ಗಾವಣೆ ಮಾಡಿರುವ ಆದೇಶವನ್ನು ಹಿಂಪಡೆದು ಹಿಂದಿನ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ನಂತರ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ರೇಣುಕಮ್ಮ, ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಶರಣಬಸವ, ವರಲಕ್ಷ್ಮಿ, ಮರಿಯಮ್ಮ, ರಮಾದೇವಿ, ಮಹ್ಮದ್ ಹನೀಫ್, ಕೆ.ಜಿ ವೀರೇಶ, ಗೋಕುರಮ್ಮ, ಗಂಗಮ್ಮ, ಅಕ್ಕಮಹಾದೇವಿ, ವಿಶಾಲಾಕ್ಷಮ್ಮ, ಜರೀನಾಬೇಗಂ, ಅಲ್ಲಾಭಕ್ಷ, ಶರಣಮ್ಮ, ನಿಂಗಪ್ಪ, ಶ್ರೀಲೇಖಾ, ಶ್ರೀಧರ, ಕಲಾಣಮ್ಮ ಸೇರಿದಂತೆ ಅಂಗನವಾಡಿ, ಬಿಸಿಯೂಟ ಪಾಲ್ಗೊಂಡಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X