ರಾಯಚೂರು | ಸಿಸಿ ರಸ್ತೆ ನಿರ್ಮಾಣಕ್ಕೆ ಮನವಿ

ರಾಯಚೂರು : ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಸಿಸಿ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪುರಸಭೆ ಮುಖ್ಯಾಧಿಕಾರಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಹಾಗೂ ಮಾಲಾಧಾರಿಗಳು ಆಗಮಿಸುತ್ತಾರೆ. ಆದರೆ ಸರಿಯಾದ ರಸ್ತೆ ಇಲ್ಲದೆ ಭಕ್ತರು ದೇವಸ್ಥಾನಕ್ಕೆ ಹೋಗಲು ಹರಸಾಹಸ ಪಡುತ್ತಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ.
ಕಾರಣ ಕೂಡಲೇ ಲಕ್ಷ್ಮಿ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನದವರೆಗೆ ಸಿಸಿ ರಸ್ತೆ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ತಿಮ್ಮಾರೆಡ್ಡಿ, ರಮೇಶ ಗುತ್ತೆದಾರ, ಮೌನೇಶ ರೆಡ್ಡಿ, ಬಸವರಾಜ ಕಕ್ಕೇರಿ, ಯಲ್ಲಪ್ಪ ಬಂಡಿ, ಈರಣ್ಣ ಗುರುಸ್ವಾಮಿ, ಪ್ರವೀಣ್ ಸ್ವಾಮಿ, ರಾಜೇಶ ಮಾಣಿಕ್ ಇದ್ದರು.
Next Story





