ರಾಯಚೂರು | ಸಹಾಯಧನಕ್ಕೆ ಅರ್ಹ ರೈತರಿಂದ ಅರ್ಜಿ ಆಹ್ವಾನ

ರಾಯಚೂರು : ಇಲ್ಲಿನ ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನೆರಳು ಪರದೆ ಹಾಗೂ ಪಾಲಿಮನೆ ನಿರ್ಮಾಣ ಮಾಡಿಕೊಂಡ ಅಥವಾ ಮಾಡಿಕೊಳ್ಳಲು ಬಯಸುವ ರೈತರು ಮತ್ತು ತಾಳೆಬೆಳೆ ಯೋಜನೆಯಡಿ ತಾಳೆ ಸಸಿಗಳನ್ನು ಹೊಸದಾಗಿ ನಾಟಿ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೀರಾವರಿ ಹೊಂದಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಒಂದು ವಾರದೊಳಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story







