Raichur | ಆರೋಗ್ಯ ಇಲಾಖೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಚೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಯಚೂರು ಜಿಲ್ಲೆಯ ಅಧೀನದಲ್ಲಿರುವ ಫಾರ್ಮಸಿ ಅಧಿಕಾರಿಗಳು ಹಾಗೂ ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳ ಒಟ್ಟು 27 ಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಫಾರ್ಮಸಿ ಅಧಿಕಾರಿ – 8 ಹುದ್ದೆಗಳು ಹಾಗೂ ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ – 19 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಜುಲೈ 8ರಿಂದ ಜುಲೈ 15ರವರೆಗೆ ಪ್ರತಿದಿನ ಬೆಳಿಗ್ಗೆ 10.30 ರಿಂದ ಸಂಜೆ 5.30 ಗಂಟೆಯವರೆಗೆ ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ. ಫಾರ್ಮಸಿ ಅಧಿಕಾರಿ ಹುದ್ದೆಗೆ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಡಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು. ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗೆ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯ ಡಿಪ್ಲೊಮಾ ಇನ್ ಲ್ಯಾಬೋರೇಟರಿ ಟೆಕ್ನಾಲಜಿ (DLT) ವಿದ್ಯಾರ್ಹತೆ ಕಡ್ಡಾಯವಾಗಿದೆ.
ನೇಮಕಾತಿಯನ್ನು 1:3 ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳೊಂದಿಗೆ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ನಿಗದಿತ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೆ






