ರಾಯಚೂರು | ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಯಚೂರು : ರಾಯಚೂರು ಹಾಗೂ ದೇವದುರ್ಗ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿವಿಧ ವೃತ್ತಿಗಳಿಗೆ 2025–26ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅಂಕಪಟ್ಟಿ, ಇತ್ತೀಚಿನ ಎರಡು ಭಾವಚಿತ್ರಗಳು, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, 371 ಜೆ ಪ್ರಮಾಣ ಪತ್ರ, ಗ್ರಾಮೀಣ ಹಾಗೂ ವ್ಯಾಸಂಗ ಪ್ರಮಾಣ ಪತ್ರಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯಚೂರು ಐಟಿಐ ಮೊಬೈಲ್ ಸಂಖ್ಯೆ 9036684778, 9449185499 ಹಾಗೂ ದೇವದುರ್ಗ ಐಟಿಐ ಮೊಬೈಲ್ ಸಂಖ್ಯೆ 9740671796, 7676126770, 9731494209, 9113519543 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
Next Story





