Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಅಲ್ಪಸಂಖ್ಯಾತ ಸಮುದಾಯದವರ ಸರಳ...

ರಾಯಚೂರು | ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ4 Sept 2025 6:46 PM IST
share
ರಾಯಚೂರು | ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ

ರಾಯಚೂರು : ಇಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ ಸಂಖ್ಯೆ: 222 ರಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ.ಗಳ ಸಹಾಯಧನ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಪಾಯಿಗಳು ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

ಷರತ್ತುಗಳು: ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು. ಜಿಲ್ಲಾ ನೋಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ ಗಳು, ದೇವಸ್ಥಾನದ ಟ್ರಸ್ಟ್ ಗಳು, ಸಂಘಗಳು, ಸೊಸೈಟಿಗಳು ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು 2.50 ಲಕ್ಷ ರೂ.ಗಳು ಮತ್ತು ಒಟ್ಟಾರೆಯಾಗಿ 5 ರೂ. ಲಕ್ಷಗಳನ್ನು ಮೀರತಕ್ಕದ್ದಲ್ಲ. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡತಕ್ಕದ್ದು. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ. ಈ ಸಾಮೂಹಿಕ ವಿವಾಹವು ಇತರೆ ಜಿಲ್ಲೆಗಳಲ್ಲಿ ನಡೆದಿದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆರವರು ದೃಢೀಕರಿಸುವುದು. ವಧು-ವರರು ಕನಿಷ್ಠ ಎಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.

ಸಾಮೂಹಿಕ ವಿವಾಹ ಕಾರ್ಯಕ್ರಮದ ಪೋಟೊ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು(ಜಿ.ಪಿ.ಎಸ್) ಸ್ಥಿರ ಚಿತ್ರಗಳನ್ನು ಸಲ್ಲಿಸುವುದು. ಅರ್ಹ ವಧು-ವರರಿಗೆ ಮಂಜೂರಾದ ಪ್ರೋತ್ಸಾಹಧನವನ್ನು ವಧು ಮತ್ತು ವರನ ಹೆಸರಿನಲ್ಲಿರುವ ಜಂಟಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಯಾವುದೇ ತರಹದ ಬಾಲ್ಯವಿವಾಹ ಅಥವಾ ಅಪ್ರಾಪ್ತ ವಯಸ್ಸಿನ ವಿವಾಹಗಳು ಜರುಗದಿರುವಂತೆ ಖಾತ್ರಿಪಡಿಸಿಕೊಳ್ಳುವ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ (ಸಿ.ಡಿ.ಪಿ,ಒ) ರವರು ಈ ಪ್ರಕ್ರಿಯೆಯ ಭಾಗವನ್ನಾಗಿಸತಕ್ಕದ್ದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 5000 ರೂ.ಗಳನ್ನು ನೀಡುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು.

ಪ್ರೋತ್ಸಾಹ ಧನ ಪಡೆಯಲು ಮದುವೆ ದಿನಾಂಕದ 3 ತಿಂಗಳ ಒಳಗಾಗಿ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರ ಕಚೇರಿಗೆ ನಿಗಧಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮಾಹಿತಿ ಕೇಂದ್ರ ರಾಯಚೂರು: 9731028420, ದೇವದುರ್ಗ: 9148233616, ಲಿಂಗಸುಗೂರು: 9886447863, ಮಾನವಿ: 887334758 ಹಾಗೂ ಸಿಂಧನೂರು: 8217621732ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X