Raichur | ‘ಕೃಷಿ ರತ್ನ’ ಪ್ರಶಸ್ತಿಗೆ ಪ್ರಗತಿಪರ ಕೃಷಿಕರಿಂದ ಅರ್ಜಿ ಆಹ್ವಾನ

ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆಯನ್ನು ನವೆಂಬರ್ 22ರಂದು ಮುಖ್ಯ ಆವರಣದಲ್ಲಿ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಕೃಷಿ ರತ್ನ’ ಪ್ರಶಸ್ತಿಗೆ ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಪರ ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಸಾಧನೆಗಾಗಿ ನೀಡಲಾಗುವ ಈ ಪ್ರಶಸ್ತಿಗೆ ಸಂಬಂಧಿಸಿದ ಅರ್ಜಿ ನಮೂನೆಗಳನ್ನು ರಾಯಚೂರು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಪಡೆಯಬಹುದು. ಅಲ್ಲದೆ, ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ https://uasraichur.karnataka.gov.in/uploads/Krishi Ratna Award_removed_1793684370.pdf ನಲ್ಲೂ ಅರ್ಜಿಗಳು ಲಭ್ಯವಿರುತ್ತವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ರಾಯಚೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರ ಕಚೇರಿಗೆ ಸಲ್ಲಿಸಲು ನವೆಂಬರ್ 12ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯಚೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರನ್ನು ಅಥವಾ 9480696314 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




