Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ,...

ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ, ದೌರ್ಜನ್ಯ ಪ್ರಕರಣಗಳಲ್ಲಿ ರಾಯಚೂರು ಮುಂಚೂಣಿ: ಡಿಸಿ ಪೂವಿತಾ ಎಸ್.

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ25 Nov 2026 8:23 PM IST
share
ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ, ದೌರ್ಜನ್ಯ ಪ್ರಕರಣಗಳಲ್ಲಿ ರಾಯಚೂರು ಮುಂಚೂಣಿ: ಡಿಸಿ ಪೂವಿತಾ ಎಸ್.

ರಾಯಚೂರು: ಐತಿಹಾಸಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಹೆಸರುವಾಸಿಯಾಗಿರುವ ರಾಯಚೂರು ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ದೌರ್ಜನ್ಯ ಪ್ರಕರಣಗಳು ರಾಜ್ಯದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಪಿಡುಗುಗಳನ್ನು ಹೋಗಲಾಡಿಸಿ ಜಿಲ್ಲೆಯನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಸಾರ್ವಜನಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಕರೆ ನೀಡಿದರು.

ರಾಯಚೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ನಗರದ ಸಿಯಾತಲಾಬ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ದೌರ್ಜನ್ಯ ಪ್ರಕರಣಗಳ ತಾಲೂಕು ನಿಯಂತ್ರಣ ಸಮಿತಿಯಿಂದ ಆಯೋಜಿಸಿದ್ದ ಸಮನ್ವಯ ಸಮಿತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳು ಹಾಗೂ ಕುಟುಂಬಗಳಿಗೆ ತ್ವರಿತ ನ್ಯಾಯ, ರಕ್ಷಣೆ, ಪರಿಹಾರ ಮತ್ತು ಪುನರ್ವಸತಿ ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ರಾಜ್ಯದಲ್ಲಿ ಅತಿ ಹೆಚ್ಚು ದೌರ್ಜನ್ಯ ಪ್ರಕರಣಗಳು ಹಾಗೂ 18 ವರ್ಷದೊಳಗಿನ ಹದಿಹರೆಯದ ಗರ್ಭಧಾರಣೆ ಪ್ರಕರಣಗಳಲ್ಲಿ ರಾಯಚೂರು ಮೊದಲ ಸ್ಥಾನದಲ್ಲಿದೆ. ಬಾಲ್ಯವಿವಾಹ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಅಪಖ್ಯಾತಿಯಿಂದ ಜಿಲ್ಲೆ ಹೊರಬಂದು ಇಂತಹ ಪ್ರಕರಣಗಳ ಸಂಖ್ಯೆಯಲ್ಲಿ ಕೊನೆಯ ಸ್ಥಾನ ತಲುಪಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಹಿಂದಿನ ತಲೆಮಾರಿನವರು ಚಿಕ್ಕ ವಯಸ್ಸಿನಲ್ಲಿ ಮದುವೆಯಾಗಿ ಅನುಭವಿಸಿದ ಕಷ್ಟಗಳು ಮುಂದಿನ ಪೀಳಿಗೆಯ ಮಕ್ಕಳು ಹಾಗೂ ಮೊಮ್ಮಕ್ಕಳಿಗೆ ಎದುರಾಗದಂತೆ ಪೋಷಕರು ಎಚ್ಚರ ವಹಿಸಬೇಕು ಎಂದರು.

ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆ ಕುರಿತು ಜಾಗೃತಿ :

ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಯಾವುದೇ ರೀತಿಯ ದೌರ್ಜನ್ಯ ನಡೆದರೆ ತಕ್ಷಣ ದೂರು ನೀಡಬೇಕು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಥವಾ ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದರೆ ತಕ್ಷಣ ತುರ್ತು ಸಹಾಯವಾಣಿ 112 ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕರೆ :

ಸಿಯಾತಲಾಬ್ ವ್ಯಾಪ್ತಿಯಲ್ಲಿ ಮದ್ಯ, ಸೇಂದಿ, ಸಿಎಚ್ ಪೌಡರ್, ಗುಟ್ಕಾ ಹಾಗೂ ಇತರ ಮಾದಕ ವಸ್ತುಗಳಿಗೆ ಯುವಕರು ಮತ್ತು ಪುರುಷರು ಬಲಿಯಾಗುತ್ತಿದ್ದಾರೆ ಎಂಬ ದೂರುಗಳಿವೆ. ವ್ಯಸನದಿಂದ ಹೊರಬರಲು ಇಚ್ಛಿಸುವವರಿಗೆ ಆರೋಗ್ಯ ಇಲಾಖೆಯಿಂದ ಸೂಕ್ತ ಚಿಕಿತ್ಸೆ ಮತ್ತು ನೆರವು ನೀಡಲಾಗುವುದು. ಸ್ಥಳೀಯರು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಬಾಲ್ಯವಿವಾಹ ಮುಕ್ತವಾಗಿಸಲು ಪೋಷಕರು ಮತ್ತು ಶಿಕ್ಷಕರು ಮುಂದಾಗಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಮಕ್ಕಳು 18 ವರ್ಷ ತುಂಬುವ ಮೊದಲೇ ಮದುವೆ ಮಾಡಲು ಪೋಷಕರು ಮುಂದಾಗುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ತಾಯಂದಿರು ಹಾಗೂ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಕನಿಷ್ಠ 21 ವರ್ಷ ತುಂಬುವವರೆಗೆ ಮತ್ತು ಪದವಿ ಶಿಕ್ಷಣ ಪೂರ್ಣಗೊಳಿಸುವವರೆಗೆ ಉತ್ತಮ ಶಿಕ್ಷಣ ನೀಡಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮದುವೆ ಮಾಡುವುದು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ. ಈ ಕುರಿತು ತಮ್ಮ ಬಡಾವಣೆ ಹಾಗೂ ಸಂಬಂಧಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನವರು ಮನೆ ಬಿಟ್ಟು ಓಡಿಹೋಗುವ ಕಾರಣದಿಂದ ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಇಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಾಲೆಗೆ ಪದೇಪದೇ ಗೈರುಹಾಜರಾಗುವ ವಿದ್ಯಾರ್ಥಿಗಳ ಬಗ್ಗೆ ಶಿಕ್ಷಕರು ವಿಶೇಷ ಗಮನಹರಿಸಬೇಕು. ಮಕ್ಕಳು ನಿರಂತರವಾಗಿ ಶಾಲೆಗೆ ಬಾರದಿದ್ದರೆ ತಕ್ಷಣ ಅವರ ಮನೆಗೆ ಭೇಟಿ ನೀಡಿ, ಸಮಸ್ಯೆ ವಿಚಾರಿಸಿ ಪೋಷಕರಿಗೆ ತಿಳಿವಳಿಕೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಸಮಾಜದಲ್ಲಿ ಯಾವುದೇ ಕಾರಣಕ್ಕೂ ಜನಾಂಗೀಯ ವೈಷಮ್ಯ ಅಥವಾ ಗಲಾಟೆಗಳಿಗೆ ಅವಕಾಶ ನೀಡಬಾರದು. ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಸಮಾನತೆ ಮತ್ತು ಭಾವೈಕ್ಯತೆಯ ಮನೋಭಾವ ಬೆಳೆಸಿ, ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಸಾರ್ವಜನಿಕರು ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸದಾ ಸಾರ್ವಜನಿಕರ ನೆರವಿಗೆ ಇರಲಿದೆ. ಯಾವುದೇ ಸಮಸ್ಯೆ ಎದುರಾದರೂ ಅಥವಾ ಬಾಲ್ಯವಿವಾಹದಂತಹ ಪ್ರಕರಣಗಳು ಕಂಡುಬಂದರೂ ತಕ್ಷಣ ತುರ್ತು ಸಹಾಯವಾಣಿ 112 ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ ಮಾತನಾಡಿ, ಭಾರತದ ನೆಲದಲ್ಲಿ ಹುಟ್ಟಿದ ಪ್ರತಿಯೊಬ್ಬ ಪ್ರಜೆಯೂ ಹುಟ್ಟಿನಿಂದಲೇ ಸಮಾನ ಹಕ್ಕುಗಳನ್ನು ಪಡೆದಿರುತ್ತಾನೆ. ಬೆಳೆಯುತ್ತಾ ವಿಶ್ವಮಾನವನಾಗುತ್ತಾನೆ. ಇತಿಹಾಸವನ್ನು ಗಮನಿಸಿದಾಗ ಮೂಲತಃ ನಾವೆಲ್ಲರೂ ಒಂದೇ ಮನುಷ್ಯರು. ನಮ್ಮ ವೃತ್ತಿ ಹಾಗೂ ಜೀವನಶೈಲಿಯನ್ನು ಆಧರಿಸಿ ವಿವಿಧ ಜಾತಿ ಮತ್ತು ಗುಂಪುಗಳು ಗುರುತಿಸಲ್ಪಟ್ಟಿವೆ. ನಾವೆಲ್ಲರೂ ಒಂದೇ ಕುಟುಂಬದವರು ಎಂಬ ಭಾವನೆಯೊಂದಿಗೆ ಬದುಕಬೇಕು. ಆಧುನಿಕ ಮತ್ತು ಕಂಪ್ಯೂಟರ್ ಯುಗದಲ್ಲಿ ಜಾತಿ ಆಧಾರಿತ ಅಥವಾ ಯಾವುದೇ ರೀತಿಯ ದೌರ್ಜನ್ಯಕ್ಕೆ ಅವಕಾಶ ಇರಬಾರದು ಎಂದರು.

ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಆಗಾಗ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಪ್ರಕರಣಗಳನ್ನು ತಡೆಯಲು ಹಾಗೂ ದೌರ್ಜನ್ಯಕ್ಕೊಳಗಾದವರಿಗೆ ಮತ್ತು ದೌರ್ಜನ್ಯ ಎಸಗುವವರಿಗೆ ಕಾನೂನಿನ ಸ್ಪಷ್ಟ ಅರಿವು ಮೂಡಿಸಲು ಜಿಲ್ಲಾಧಿಕಾರಿಗಳ ದೂರದೃಷ್ಟಿಯಿಂದ ಈ ಜಾಗೃತಿ ಅಭಿಯಾನ ರೂಪಿಸಲಾಗಿದೆ ಎಂದು ತಿಳಿಸಿದರು.

ದೌರ್ಜನ್ಯ ಎಸಗುವವರಿಗೆ ಕಾನೂನಿನಡಿ ವಿಧಿಸಲಾಗುವ ಕಠಿಣ ಶಿಕ್ಷೆ ಹಾಗೂ ದೌರ್ಜನ್ಯಕ್ಕೊಳಗಾದವರಿಗೆ ಸರ್ಕಾರದಿಂದ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತು ಜನಸಾಮಾನ್ಯರಿಗೆ ಮಾಹಿತಿ ತಲುಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ, ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಬಾಲ್ಯದಿಂದಲೇ ಕಾನೂನಿನ ಅರಿವು ಮೂಡಿಸಬೇಕು. ಮುಂದೊಂದು ದಿನ ಮಕ್ಕಳು ಜಿಲ್ಲಾಧಿಕಾರಿ, ಸಿಇಒ, ಎಸ್‌ಪಿ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಕನಸು ಕಾಣಬೇಕು. ಸಮಾಜದಲ್ಲಿ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವ ಪ್ರಬುದ್ಧ ಪ್ರಜೆಗಳಾಗಿ ಬೆಳೆಯಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಮಿತಿಯ ಸದಸ್ಯ ಕುಮಾರ್ ಕೆ.ವಿ., ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಹಲವು ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಒಟ್ಟಾಗಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.

ವಿವಿಧತೆಯಲ್ಲಿ ಏಕತೆಯನ್ನು ಸಾಧಿಸುವುದು, ವರ್ಣಭೇದ, ಜಾತಿಭೇದ ಸೇರಿದಂತೆ ಯಾವುದೇ ರೀತಿಯ ತಾರತಮ್ಯವಿಲ್ಲದೆ ನಾವೆಲ್ಲರೂ ಸೋದರ-ಸೋದರಿಯರಂತೆ ಮನುಷ್ಯರಾಗಿ ಬದುಕುವುದು ಅಗತ್ಯವಾಗಿದೆ. ದೌರ್ಜನ್ಯದ ಕುರಿತು ಅರಿವು ಮೂಡಿಸುವುದು ಹಾಗೂ ಅನ್ಯಾಯಕ್ಕೆ ಒಳಗಾದಾಗ ಸಂತ್ರಸ್ತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ. ಜಿಲ್ಲಾಡಳಿತವು ಎಲ್ಲ ಸಮಾಜ ಮತ್ತು ಧರ್ಮದವರನ್ನು ಒಗ್ಗೂಡಿಸಿ ಇಂತಹ ಮಾದರಿ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ದೌರ್ಜನ್ಯ ನಡೆದಾಗ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳುತ್ತಿರುವುದಕ್ಕೆ ಸಮಿತಿಯ ಸದಸ್ಯರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ರಾಯಚೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಈಶ್ವರ ಕುಮಾರ್ ಕಾಂದೂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹಾಳಿಂಗರಾಯ ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್., ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವರ್, ದೌರ್ಜನ್ಯ ಪ್ರಕರಣಗಳ ಜಿಲ್ಲಾ ಮಟ್ಟದ ನಿಯಂತ್ರಣ ಸಮಿತಿಯ ಸದಸ್ಯರಾದ ರಘುವೀರ್ ನಾಯಕ, ಕುಮಾರ್ ಕೆ., ಸುಧಾಂ ಹಾಗೂ ಸಿಯಾತಲಾಬ್ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶಶಿಕಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಸತಿ ನಿಲಯಗಳ ನಿಲಯಪಾಲಕರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಿಯಾತಲಾಬ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಮಾಜಿಕ ಜಾಗೃತಿ ಕುರಿತು ಮೂಕನಾಟಕ ಪ್ರದರ್ಶಿಸಿದರು. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಪಾಲಕ ತಾಯಪ್ಪ ಕಾರ್ಯಕ್ರಮ ನಿರೂಪಿಸಿದರು.

Tags

Raichurchild marriageteenage pregnancyatrocities
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X