Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಎಸ್‌ಐಆರ್‌ನಿಂದ ಮತದಾನದ...

Raichur | ಎಸ್‌ಐಆರ್‌ನಿಂದ ಮತದಾನದ ಹಕ್ಕು ಕಸಿಯುವ ಯತ್ನ: ಎ.ಶರಣಕುಮಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Aug 2026 9:56 PM IST
share
Raichur | ಎಸ್‌ಐಆರ್‌ನಿಂದ ಮತದಾನದ ಹಕ್ಕು ಕಸಿಯುವ ಯತ್ನ:  ಎ.ಶರಣಕುಮಾರ ಆರೋಪ

ರಾಯಚೂರು, ಆ.5: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲಕ್ಷಾಂತರ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಸಂಚಾಲಕ ಎ.ಶರಣಕುಮಾರ ಆರೋಪಿಸಿದರು.

ಬುಧವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಸುಮಾರು 1.10 ಕೋಟಿ ಮತದಾರರು ಡಿಲೀಟ್ ಪಟ್ಟಿಯಲ್ಲಿದ್ದು, ಇದು ಒಟ್ಟು ಮತದಾರರಲ್ಲಿ ಶೇ.20ರಷ್ಟಾಗಿದೆ. ಬೆಂಗಳೂರಿನಲ್ಲಿ ಮಾತ್ರ ಶೇ.40ರಷ್ಟು ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 34 ಲಕ್ಷಕ್ಕೂ ಹೆಚ್ಚು ಮ್ಯಾಪಿಂಗ್ ಆಗದ ಮತದಾರರಿಗೆ ನೋಟಿಸ್ ನೀಡುವ ಸಾಧ್ಯತೆ ಇದ್ದು, ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಪ್ರಕ್ರಿಯೆಯಿಂದಲೂ ಮತದಾನದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಬಹುದು ಎಂದು ಹೇಳಿದರು.

ಚುನಾವಣಾ ಆಯೋಗವು ಸಮರ್ಪಕ ಯೋಜನೆ ಮತ್ತು ತರಬೇತಿಯಿಲ್ಲದೆ ಎಸ್‌ಐಆರ್ ಪ್ರಕ್ರಿಯೆ ಜಾರಿಗೊಳಿಸಿದ್ದು, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮೇಲೆ ಹೆಚ್ಚುವರಿ ಹೊಣೆಗಾರಿಕೆ ಹೊರಿಸಲಾಗಿದೆ. ಪ್ರಕ್ರಿಯೆಯಲ್ಲಿನ ದೋಷಗಳಿಗೆ ಬಿಎಲ್‌ಒಗಳನ್ನು ಹೊಣೆಗಾರರನ್ನಾಗಿಸುವ ಬದಲು ಚುನಾವಣಾ ಆಯೋಗವೇ ಜವಾಬ್ದಾರಿ ವಹಿಸಬೇಕು ಎಂದು ಆಗ್ರಹಿಸಿದರು.

ಉದ್ಯೋಗ, ಶಿಕ್ಷಣ, ದುಡಿಮೆ ಹಾಗೂ ಇತರ ಕಾರಣಗಳಿಂದ ತಾತ್ಕಾಲಿಕವಾಗಿ ಸ್ಥಳಾಂತರಗೊಂಡಿರುವ ಮತದಾರರನ್ನು ಡಿಲೀಟ್ ಮತದಾರರೆಂದು ಪರಿಗಣಿಸುವುದು ಅನ್ಯಾಯವಾಗಿದೆ. ವಲಸೆ ಕಾರ್ಮಿಕರು, ಬಾಡಿಗೆ ಮನೆ ಬದಲಾಯಿಸಿರುವವರು ಹಾಗೂ ತಾತ್ಕಾಲಿಕವಾಗಿ ಮನೆಯಲ್ಲಿ ಇಲ್ಲದವರ ಹೆಸರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ತೆಗೆದುಹಾಕಬಾರದು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ಆರ್. ಬೇರಿ, ಜಮಾತೆ ಇಸ್ಲಾಂ ಜಿಲ್ಲಾಧ್ಯಕ್ಷ ಅಸಿಮುದ್ದೀನ್ ಅಖ್ತರ್, ಮಾರೆಪ್ಪ ಹರವಿ, ಆಂಜನೇಯ ಕುರುಬದೊಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X