ರಾಯಚೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ ದಾಖಲು

ರಾಯಚೂರು: ವ್ಯಕ್ತಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಕವಿತಾಳ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ದೋತರಬಂಡಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ದೋತರಬಂಡಿ ಗ್ರಾಮದ ಹುಚ್ಚಪ್ಪ (65) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದೆ. ಬಾಲಕಿಯ ತಾಯಿ ರೂಪ ನಾಗಪ್ಪ ನೀಡಿದ ದೂರಿನ ಮೇಲೆ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾಲಕಿ ಹಾಗೂ ಆರೋಪಿಯ ಮೊಮ್ಮಗ ಇಬ್ಬರು ಒಂದೇ ಶಾಲೆಯಲ್ಲಿ ಕಲಿಯುತ್ತಿದ್ದರು. ಬಾಲಕಿಯು ಆರೋಪಿಯ ಮೊಮ್ಮಗನ ಜೊತೆ ಮನೆಗೆ ಹೋಗಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





