ರಾಯಚೂರು | ಬಿ.ವೆಂಕಟಸಿಂಗ್ ತಾಯಿ ಯಮುನಾಬಾಯಿ ನಿಧನ

ರಾಯಚೂರು, ಡಿ.11: ಹಿರಿಯ ಪತ್ರಕರ್ತ ಹಾಗೂ ಪ್ರಸ್ತುತ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ.ವೆಂಕಟಸಿಂಗ್ ಅವರ ತಾಯಿ ಯಮುನಾಬಾಯಿ ರಘುನಾಥಸಿಂಗ್(80) ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಕಲಬುರ್ಗಿಯ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 10:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ ಮಾಹಿತಿ ಆಯೋಗದ ಸದಸ್ಯ ಬಿ.ವೆಂಕಟಸಿಂಗ್, ಸತ್ಯನಾರಾಯಣ ಸಿಂಗ್, ಹನುಮಾನ್ ಸಿಂಗ್ ಮೂವರು ಪುತ್ರರು ಹಾಗೂ ನಾಲ್ವರು ಪುತ್ರಿಯರು, ಮೊಮ್ಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Next Story





