ರಾಯಚೂರು | ಡಿವೈಡರ್ಗೆ ಬೈಕ್ ಢಿಕ್ಕಿ : ಸವಾರ ಮೃತ್ಯು

ಸಾಂದರ್ಭಿಕ ಚಿತ್ರ
ರಾಯಚೂರು: ಡಿವೈಡರ್ಗೆ ಬೈಕ್ ಢಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಭಾನುವಾರ ನಗರದ ಆರ್ಟಿಓ ವೃತ್ತದ ಬಳಿ ನಡೆದಿದೆ.
ಮೃತರನ್ನು ರಾಯಚೂರಿನ ಡಿಸಿಬಿ ಬ್ಯಾಂಕ್ ಉದ್ಯೋಗಿ ರಾಕೇಶ್( 30) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ಮದ್ಯ ಸೇವನೆ ಮಾಡಿ ಸ್ನೇಹಿತನ ಜೊತೆಗೆ ಮನೆಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ಹಿಂಬದಿಯಲ್ಲಿ ಕುಳಿತ ಸ್ನೇಹಿತನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





