ರಾಯಚೂರು | ಬೈಕ್-ಇನ್ನೋವಾ ಕಾರು ಢಿಕ್ಕಿ : ಸವಾರ ಮೃತ್ಯು

ರಾಯಚೂರು: ಬೈಕ್ ಮತ್ತು ಇನ್ನೋವಾ ಕಾರು ನಡುವೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತ ಬೈಕ್ ಸವಾರ ಲಿಂಗಸುಗೂರು ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ವೀರೇಶ (33) ಎಂದು ಹೇಳಲಾಗಿದೆ.
ಇನ್ನೋವಾ ಕಾರಿನಲ್ಲಿದ್ದ ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





