Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ದಲಿತರ ಹತ್ಯೆ ಖಂಡಿಸಿ ಬೈಕ್...

Raichur | ದಲಿತರ ಹತ್ಯೆ ಖಂಡಿಸಿ ಬೈಕ್ ರ‍್ಯಾಲಿ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Aug 2026 8:14 PM IST
share
Raichur | ದಲಿತರ ಹತ್ಯೆ ಖಂಡಿಸಿ ಬೈಕ್ ರ‍್ಯಾಲಿ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ದೇವದುರ್ಗ (ರಾಯಚೂರು): ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ನಡೆದ ಬಿಎಸ್‌ಪಿ ಮುಖಂಡ ಭೂಮಾನಂದ ಅವರ ಕೊಲೆ, ಹೊಕ್ರಾಣಿಯ ದಲಿತ ಯುವತಿ ಅಶ್ವಿನಿ ಹಾಗೂ ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ ದಲಿತ ಮಹಿಳೆ ರಾಣೆಮ್ಮ ಅವರ ಕೊಲೆ ಪ್ರಕರಣಗಳನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು, ಬಿಎಸ್‌ಪಿ ಹಾಗೂ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಭಾನುವಾರ ಬೈಕ್ ರ‍್ಯಾಲಿ ನಡೆಸಲಾಯಿತು.

ಹದ್ದಿನಾಳ ಗ್ರಾಮದ ಭೂಮಾನಂದ ಅವರ ಸಮಾಧಿಯಿಂದ ರಾಯಚೂರು ಜಿಲ್ಲಾ ಕೇಂದ್ರದವರೆಗೆ ಬೈಕ್ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಮೂರು ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಹೋರಾಟಕ್ಕೂ ಮುನ್ನ ಹದ್ದಿನಾಳ ಗ್ರಾಮದಲ್ಲಿ ರಸ್ತೆ ತಡೆ ನಡೆಸಲಾಯಿತು. ಬಳಿಕ ಬೈಕ್ ರ‍್ಯಾಲಿ ಹಾಗೂ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ರ‍್ಯಾಲಿಯುದ್ದಕ್ಕೂ ದಲಿತಪರ ಹೋರಾಟಗಾರ ಅಂಬಣ್ಣ ಅರೋಲಿಕರ್ ಹಾಗೂ ಸಂಗಡಿಗರು ಕ್ರಾಂತಿ ಗೀತೆಗಳನ್ನು ಹಾಡಿದರು.

ಹೋರಾಟಗಾರರಾದ ಎಸ್. ಮಾರೆಪ್ಪ ವಕೀಲ, ನರಸಪ್ಪ ದಂಡೋರ ಸೇರಿದಂತೆ ಹಲವರು ಮಾತನಾಡಿ, ದಲಿತರ ಮೇಲೆ ನಡೆಯುತ್ತಿರುವ ಭೀಕರ ಹತ್ಯೆಗಳು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಪ್ರಕರಣಗಳಲ್ಲಿರುವ ಆರೋಪಿಗಳು ಯಾರೇ ಆಗಿದ್ದರೂ, ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದಲಿತಪರ ಹೋರಾಟಗಾರರಾ ರವೀಂದ್ರನಾಥ ಪಟ್ಟಿ, ಎಂ ಆರ್ ಎಸ್ ಎಚ್ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ, ದಲಿತ ಸಂಘರ್ಷ ಸಮಿತಿ ಸಂಚಾಲಕ ಹನುಮಂತಪ್ಪ ಕಾಕರಗಲ್, ಶಿವಪ್ಪ ಫಲಕನಮರಡಿ, ಎಸ್ ಮಾರೆಪ್ಪ, ಹೇಮರಾಜ ಅಸ್ಕಿಹಾಳ, ಶಾಂತಕುಮಾರ ಹೊನ್ನಟಗಿ, ರಾಜಪ್ಪ ಸಿರವಾರಕರ್, ಜೆ ಅಬ್ರಾಂ ಹೊನ್ನಟಗಿ, ಹಿರಿಯ ಬಹುಜನ ಚಿಂತಕ ಎಂ ಆರ್ ಬೇರಿ, ಎಂ ಆರ್ ಎಸ್ ಎಚ್ ಜಿಲ್ಲಾಧ್ಯಕ್ಷ ಹನುಮಂತ ಮನ್ನಾಪುರಿ, ವಕೀಲ ತಮ್ಮಣ್ಣ ಬೊಮ್ಮನಾಳ, ಬಸವರಾಜ, ಸೂರಿ, ನರಸಪ್ಪ ದಂಡೋರ, ಹಿರಿಯ ಮುಖಂಡ ಭೂತಪ್ಪ ಜಾಲಹಳ್ಳಿ, ಯಲ್ಲಪ್ಪ ಆಲ್ದರ್ತಿ, ಜೈ ಭೀಮ ಹನುಮಂತ, ಬಸವರಾಜ ನಕ್ಕುಂದಿ, ಯೇಸು ಗಬ್ಬೂರು, ಜಾಕೋಬ್ ಬೋಮ್ಮನಾಳ, ಬಸವರಾಜ ಜಗ್ಲಿ, ಮೌನೇಶ ಗಾಣದಾಳ, ಸಾಬಣ್ಣ ಕಮಲದಿನ್ನಿ, ಮರಿಗೌಡ ಮಲದಕಲ್, ಯಲ್ಲಪ್ಪ ಹಿರೇಬಾದರದಿನ್ನಿ, ಮೌನೇಶ ಪೀತಗಲ, ನರಸಿಂಹಲು, ಎಲ್ ವಿ ಸುರೇಶ, ಡಿ ಜಯಪ್ಪ ಸಿರವಾರ, ಮಲ್ಲಪ್ಪ ನವಲಕಲ ಮತ್ತು ಹತ್ತಕ್ಕೂ ಹೆಚ್ಚು ದಲಿತಪರ ಸಂಘಟನೆಯ ರಾಜ್ಯ ಜಿಲ್ಲಾ ಮತ್ತು ವಿವಿಧ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಬಿಎಸ್ಪಿ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X