Raichur | ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ; ಸವಾರ ಸಾವು

ಸಾಂದರ್ಭಿಕ ಚಿತ್ರ
ರಾಯಚೂರು: ಸಾರಿಗೆ ಬಸ್ ನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡಿದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ರಾಯಚೂರಿನ ಅಂದ್ರೂನ್ ಕಿಲ್ಲಾ ಬಡಾವಣೆಯ ಯಾಸೀನ್ (28) ಮೃತಪಟ್ಟ ಯುವಕ.
ಯುವಕ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಹಿಂಬದಿಯಿಂದ ಸಾರಿಗೆ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದರು.
Next Story




