ರಾಯಚೂರು | ತುರವಿಹಾಳದಲ್ಲಿ ಉಪ ಚುನಾವಣೆ : ಶಸ್ತ್ರಗಳನ್ನು ಠಾಣೆಯಲ್ಲಿಡಲು ಆದೇಶ

ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು : ನಗರ ಸ್ಥಳೀಯ ಸಂಸ್ಥೆ ಸಾರ್ವತ್ರಿಕ ಹಾಗೂ ಉಪ ಚುನಾವಣೆ-2025ರ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಈ ಚುನಾವಣೆಯು ಶಾಂತಿಯುತವಾಗಿ ನಡೆಸಲು ಮುಂಜಾಗ್ರತೆ ಕ್ರಮವಾಗಿ (ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ರಿಜರ್ವ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ಡ್ ಬ್ಯಾಂಕುಗಳ ಸೆಕ್ಯೂರಟಿ ಗಾರ್ಡಗಳ, ಆಯುಧಗಳನ್ನು ಹೊರತುಪಡಿಸಿ) ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಯುಧಗಳನ್ನು ಪರವಾನಿಗೆದಾರರು ಸಾರ್ವಜನಿಕ ಸ್ಥಳಗಳಲ್ಲಿ ಹೊತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಿ ಹಾಗೂ ಆಯುಧಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
Next Story





